ಹುಬ್ಬಳ್ಳಿ: ಪೊಲೀಸ್ ಸಂಸ್ಮರಣಾ ದಿನದ ಅಂಗವಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಂದ ಹುಬ್ಬಳ್ಳಿಯ ಸಿ.ಎ. ಆರ್. ಮೈದಾನದಲ್ಲಿ ಹುತಾತ್ಮ ಪೊಲೀಸರಿಗೆ ಗೌರವ ನಮನ ಸಲ್ಲಿಸಿದರು.

ನಂತರ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಪೊಲೀಸರ ಕರ್ತವ್ಯ ಅಮೂಲ್ಯವಾಗಿದ್ದು, ತಮ್ಮ ಜೀವನದ ಹಂಗನ್ನು ತೊರೆದು ಕರ್ತವ್ಯ ನಿರ್ವಹಿಸುತ್ತಾರೆ. ಅವರಿಗೆ ಬಹಳ ಗೌರವ ನೀಡಬೇಕಾಗಿದೆ. ಕಾನೂನು ಸುವ್ಯವಸ್ಥೆ ಕಾಪಾಡಲು ಸಹಕರಿಸುವ ಮನೋಭಾವ ನಾಗರಿಕರಿಗೆ ಬರಬೇಕು ಎಂದರು.
ಕಳೆದೆರಡು ವರ್ಷಗಳಲ್ಲಿ ಅತಿ ಹೆಚ್ಚು ಮುಂಬಡ್ತಿ ನೀಡಲಾಗಿದೆ. ಪೊಲೀಸರಿಗೆ ನೈರ್ತಿಕ ಸ್ಥೈರ್ಯ ತುಂಬವ ಅವಶ್ಯಕತೆ ಇದೆ. ಈಗಾಗಾಲೇ 16 ಸಾವಿರ ಪೊಲೀಸರ ನೇಮಕಾತಿಗೆ ಕ್ರಮ ಕೈಗೊಳ್ಳಲಾಗಿದೆ. 2022 ರೊಳಗೆ 50 ಸಾವಿರ ಪೊಲೀಸರ ಮನೆಗಳನ್ನು ಕಟ್ಟಲು ಕ್ರಮ ಕೈಗೊಳ್ಳಲಾಗಿದೆ. ಆರೋಗ್ಯ ಭಾಗ್ಯ, ವೇತನ ಪರಿಷ್ಕರಣೆ ಸೇರಿದಂತೆ ಪೊಲೀಸರಿಗಾಗಿ ನಿರಂತರ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಸಚಿವ ಶಂಕರ ಪಾಟೀಲ ಮುನೇನಕೊಪ್ಪ ಉಪಸ್ಥಿತರಿದ್ದರು.
Comments are closed.