ಕರ್ನಾಟಕ

ಸುಗಮ ಸಂಚಾರಕ್ಕೆ ತೊಡಕಾದ ಬೆಂಗಳೂರಿನ ಇಂದಿರಾನಗರದ ರಸ್ತೆಗಳು: ವಾಹನ ಸವಾರರ ಪರದಾಟ..!

Pinterest LinkedIn Tumblr

ಬೆಂಗಳೂರು: ಬೆಂಗಳೂರಿನ ಐಷಾರಾಮಿ ಪ್ರದೇಶಗಳಲ್ಲಿ ಒಂದು ಎಂದೇ ಕರೆಸಿಕೊಳ್ಳುವ ಇಂದಿರಾನಗರದ 100 ಅಡಿ ರಸ್ತೆಗಳಲ್ಲಿ ಹೊಂಡ ಗುಂಡಿಗಳೇ ಹೆಚ್ಚಿದ್ದು ಸುಗಮ ಸಂಚಾರಕ್ಕೆ ವಾಹನ ಸವಾರರು ಪರದಾಡುವಂತಾಗಿದೆ.

ಇಂದಿರಾನಗರ ನೂರು ಅಡಿ ರಸ್ತೆ, ಬೆಂಗಳೂರಿನ ಹಳೆ ವಿಮಾನ ನಿಲ್ದಾಣ ರಸ್ತೆ, ಹಳೆ ಮದ್ರಾಸ್ ರಸ್ತೆ ಸಂಪರ್ಕಿಸುತ್ತದೆ. ಒಂದು ಕೊನೆಯಲ್ಲಿ ಮಧ್ಯಂತರ ವರ್ತುಲ ರಸ್ತೆ ಫ್ಲೈಓವರ್ ಜಂಕ್ಷನ್ ಅಥವಾ ದೊಮ್ಮಲೂರು ಜಂ‍ಕ್ಷನ್ ಮತ್ತೊಂದು ಕೊನೆಯಲ್ಲಿ ಹಳೆ ವಿಮಾನ ನಿಲ್ದಾಣ ರಸ್ತೆ ಇದೆ.

ನಿತ್ಯ ಬೆಳಿಗ್ಗೆ ಈ ರಸ್ತೆಯಲ್ಲಿ ವಾಹನ ದಟ್ಟಣೆ ಹೆಚ್ಚಿದ್ದು ಆಟೋ ಹಾಗೂ ದ್ವಿಚಕ್ರ ವಾಹನ ಸವಾರರು ಹರಸಾಹಸಪಟ್ಟು ಸವಾರಿ ಮಾಡಬೇಕಿದೆ. ಒಂದೆಡೆ ದೂಳು, ಮತ್ತೊಂದೆಡೆ ಹೊಂಡ ಗುಂಡಿಗಳು ಯಮಯಾತನೆ ಸೃಷ್ಟಿಸುತ್ತದೆ.

‘ಕೂ’ ಮಾಡಿದ ಸಾರ್ವಜನಿಕರು..!:ಐಟಿ ಕಂಪೆನಿಗಳೇ ಸಾಲು ಸಾಲು ಚಕ್ಕಳ ಮಕ್ಕಳ ಹಾಕಿ ಕೂತಂತಿರುವ ಇಂದಿರಾನಗರದ ರೋಡು ಮೈಕೈ ತೂತು ಮಾಡಿಕೊಂಡು ಸೊರಗಿ ಸತ್ತು ಹೋಗಿದೆ.. ಅದರ ಅವಸ್ಥೆ ನೋಡಿದರೆ ಆ ರೋಡಿಗೆ ಜನ್ಮವಿತ್ತವರ ಮುಖ ನೋಡ್ಬೇಕಲ್ಲ ಅನ್ಸತ್ತೆ, ಅದನ್ನ ಏನಾದ್ರು ಮಾಡ್ರಿ ರೀ ಶ್ರೀಮಾನ್ ಬೆಂಗಳೂರನವ್ರೆ! ಪಾಪ ಕೆಂಪೇಗೌಡ್ರು!’ ಎಂದು ಸುನಿಲ್ ಎನ್ನುವವರು ಕೂ ಮಾಡಿದ್ದಾರೆ.

‘ಇಂದಿರಾ ನಗರದ 100 ಅಡಿ ವರ್ತುಲ ರಸ್ತೆಯಲ್ಲಿ ಸಾಗುವುದು ಜೀವ ಪಣಕ್ಕಿಟ್ಟು ನಡೆಸುವ ಯಾವುದೇ ಸಾಹಸಮಯ ಪ್ರದರ್ಶನ ನೀಡುವ ಸ್ಟಂಟ್ ಗಳಿಗೆ ಹೋಲಿಸಿದರೆ ಅದಕ್ಕಿಂತ ಕಡಿಮೆ ಅನುಭವನ್ನಂತೂ ನೀಡಲಾರದು. ನೀವೂ ಈ ಮಾರ್ಗದಲ್ಲಿ ಸಂಚರಿಸಿದ್ದರೆ ನಿಮ್ಮ ಅನಿಸಿಕೆ ಏನು?’ ಎಂದು ನರೇಶ್ ಕೂ ಮಾಡಿದ್ದಾರೆ

 

Comments are closed.