ಕರ್ನಾಟಕ

ಹೆಚ್ಚಿದೆ ಕೊರೋನಾ 3ನೇ ಅಲೆ ಭೀತಿ; ಕರ್ನಾಟಕದಲ್ಲೂ ಡೆಲ್ಟಾ ರೂಪಾಂತರಿ AY 4.2 ವೈರಸ್ ತಳಿ ಪತ್ತೆ..!?

Pinterest LinkedIn Tumblr

ಬೆಂಗಳೂರು: ಈ ಹಿಂದೆ ಬ್ರಿಟನ್ ನಲ್ಲಿ ಪತ್ತೆಯಾಗಿದ್ದ ಡೆಲ್ಟಾ ರೂಪಾಂತರಿಯ ಹೊಸ ತಳಿ AY 4.2 ಇದೀಗ ಕರ್ನಾಟಕದಲ್ಲೂ ಪತ್ತೆಯಾಗಿದೆ ಎನ್ನಲಾಗಿದೆ.

(ಸಂಗ್ರಹ ಚಿತ್ರ)

ಆರೋಗ್ಯ ಇಲಾಖೆ ನೀಡಿರುವ ಮಾಹಿತಿಯನ್ವಯ ಕರ್ನಾಟಕದಲ್ಲಿ ಎರಡು AY 4.2 ತಳಿ ಸೋಂಕು ಪ್ರಕರಣಗಳು ಪತ್ತೆಯಾಗಿದ್ದು, ಇದು ಡೆಲ್ಟಾ ರೂಪಾಂತರಕ್ಕಿಂತ ಹೆಚ್ಚಿನ ವೇಗದಲ್ಲಿ ಪ್ರಸರಣವಾಗುವ ಸಾಮರ್ಥ್ಯ ಹೊಂದಿದೆ ಎಂದು ಹೇಳಲಾಗಿದೆ.

‘ಗ್ಲೋಬಲ್‌ ಇನಿಷಿಯೇಟಿವ್‌ ಆನ್‌ ಅಲ್‌ ಇನ್‌ಫ್ಲುಯೆಂಜಾ ಡಾಟಾ’ ವರದಿ ಪ್ರಕಾರ ಈ AY 4.2 ತಳಿ ಸೋಂಕು ಪ್ರಕರಣಗಳು ಆಂಧ್ರಪ್ರದೇಶದಲ್ಲಿ 7, ಕೇರಳದಲ್ಲಿ 4, ಕರ್ನಾಟಕ ಮತ್ತು ತೆಲಂಗಾಣದಲ್ಲಿ ತಲಾ 2, ಮಹಾರಾಷ್ಟ್ರ, ಜಮ್ಮು ಮತ್ತು ಕಾಶ್ಮೀರದಲ್ಲಿ ತಲಾ 1 ಪತ್ತೆಯಾಗಿವೆ ಎಂದು ಹೇಳಲಾಗಿದೆ. ಇದಕ್ಕೂ ಮುನ್ನ ಈ ರೂಪಾಂತರಿ ಮಧ್ಯಪ್ರದೇಶದಲ್ಲಿ ಪತ್ತೆಯಾಗಿತ್ತು, ಆ ಮೂಲಕ ದೇಶದಲ್ಲಿ ಈ AY 4.2 ತಳಿ ಸೋಂಕು ಪ್ರಕರಣಗಳ ಸಂಖ್ಯೆ ಒಟ್ಟು 17ಕ್ಕೆ ಏರಿಕೆಯಾಗಿದೆ. ಇದಕ್ಕೆ ಮಧ್ಯಪ್ರದೇಶದ ಇಂದೋರ್‌ನಲ್ಲಿ ಇತ್ತೀಚೆಗೆ ಪತ್ತೆಯಾದ 7 ಪ್ರಕರಣಗಳನ್ನೂ ಸೇರಿಸಿದರೆ ಭಾರತದ 7 ರಾಜ್ಯಗಳಲ್ಲಿ ಒಟ್ಟು 24 ಕೇಸುಗಳು ಪತ್ತೆಯಾದಂತೆ ಆಗಲಿದೆ ಎಂದು ವರದಿಯಲ್ಲಿ ತಿಳಿಸಲಾಗಿದೆ.

Comments are closed.