ಕರ್ನಾಟಕ

ಮಂತ್ರಾಲಯದಲ್ಲಿ ಪುನೀತ್ ಮಾತಿನ ವೇಳೆ ವೀಣೆ, ತೊಟ್ಟಿಲು ಅಲುಗಾಡಿದ ವಿಡಿಯೋ ವೈರಲ್; ಶ್ರೀ ಸುಭುದೇಂದ್ರ ತೀರ್ಥರ ಸ್ಪಷ್ಟನೆ

Pinterest LinkedIn Tumblr

ರಾಯಚೂರು: ಶುಕ್ರವಾರ ಹೃದಯಾಘಾತದಿಂದ ನಿಧನರಾದ ಫವರ್ ಸ್ಟಾರ್ ಪುನೀತ್ ರಾಜಾಕುಮಾರ್ ಮಂತ್ರಾಲಯದ ರಾಘವೇಂದ್ರ ಸ್ವಾಮಿಯ ಪರಮ ಭಕ್ತರು. ಆಗಾಗ್ಗೆ ಮಂತ್ರಾಲಯಕ್ಕೆ ಭೇಟಿ ನೀಡಿ ಗುರುಗಳ ದರ್ಶನ ಪಡೆಯುವ ಪರಿಪಾಠ ಹೊಂದಿದ್ದರು.

ಕೆಲ ತಿಂಗಳಿನ ಹಿಂದೆ ಮಂತ್ರಾಲಯಕ್ಕೆ ಪುನೀತ್ ರಾಜ್ ಕುಮಾರ್ ಭೇಟಿ ನೀಡಿದ ಸಂದರ್ಭದಲ್ಲಿ ತೊಟ್ಟಿಲು ಮತ್ತು ವೀಣೆ ಅಲುಗಾಡಿತ್ತು. ಪುನೀತ್ ಮೃತರಾದ ಬಳಿಕ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ವೈರಲ್ ಆಗಿದ್ದು, ಅನೇಕರು ಸಾವಿಗೂ ಇದಕ್ಕೂ ಸಂಬಂಧ ಇರುವಂತೆ ಊಹಾಪೋಹ ಹಬ್ಬಿಸಿದ್ದಾರೆ. ಈ ಬಗ್ಗೆ ಮಂತ್ರಾಲಯದ ಪೀಠಾಧಿಪತಿ ಶ್ರೀ ಸುಭುದೇಂದ್ರ ತೀರ್ಥರು ಮಾತನಾಡಿದ್ದು, ಅವರ ಸಾವಿಗೂ ಇದಕ್ಕೂ ಸಂಬಂಧವಿಲ್ಲ. ಅದು ಆಕಸ್ಮಿಕವಾಗಿ ಆಗಿರುವ ಘಟನೆ ಎಂದು ಹೇಳಿದ್ದಾರೆ.

ಪುನೀತ್ ರಾಜ್ ಕುಮಾರ್ ಅಂದು ಅಣ್ಣ ತಮ್ಮಂದಿರು ಬಂದು ಸಂಗೀತ ಸೇವೆ ಮಾಡುವುದಾಗಿ ಹೇಳಿದ್ದರು. ಅವರು ರಾಯರ ಅನುಗ್ರಹದಿಂದಲೇ ಜನಿಸಿದ್ದಾರೆ ಎಂದು ಅವರ ತಂದೆ ಹೇಳಿದ್ದರು. ತಮ್ಮ ನೆಚ್ಚಿನ ಗುರುಗಳಾದ ರಾಘವೇಂದ್ರ ಸ್ವಾಮಿಗಳ ದರ್ಶನಕ್ಕೆ ಬಂದಾಗ ಪುನೀತ್ ಹಾಡು ಹಾಡಿದ್ದರು. ಯಾರೂ ಕೂಡಾ ಅನ್ಯತಾ ಭಾವಿಸವಾರದು. ಇದೊಂದು ಕಾಕತಾಳೀಯ. ಸಾವಿಗೂ ಇದಕ್ಕೂ ಸಂಬಂಧ ಇಲ್ಲ ಎಂದು ಮಂತ್ರಾಲಯದ ಪೀಠಾಧಿಪತಿ ಶ್ರೀ ಸುಭುದೇಂದ್ರ ತೀರ್ಥರು ಸ್ಪಷ್ಟನೆ ನೀಡಿದ್ದಾರೆ.

Comments are closed.