ಕರ್ನಾಟಕ

ಪುನೀತ್ ರಾಜಕುಮಾರ್’ಗೆ ಮರಣೋತ್ತರವಾಗಿ ಪ್ರದ್ಮಶ್ರಿ ಪ್ರಶಸ್ತಿ ನೀಡಲು ಮಾಜಿ ಸಿಎಂ ಸಿದ್ಧರಾಮಯ್ಯ ಮನವಿ

Pinterest LinkedIn Tumblr

ಬೆಂಗಳೂರು: ಹೃದಯಾಘಾತದಿಂದ ಶುಕ್ರವಾರದಂದು ನಿಧನರಾದ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರಿಗೆ ಮರಣೋತ್ತರವಾಗಿ ಪದ್ಮಶ್ರಿ ಪ್ರಶಸ್ತಿ ನೀಡಬೇಕೆಂದು ವಿಧಾನಸಭೆ ವಿರೋಧ ಪಕ್ಷದ ನಾಯಕ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಧಾನಿ ನರೇಂದ್ರ ಮೋದಿ ಅವರಲ್ಲಿ ಮನವಿ ಮಾಡಿದ್ದಾರೆ.

(File Photo)

ಈ ಕುರಿತು ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ಯಾವ ಪ್ರಶಸ್ತಿ ಗೌರವಗಳಿಗಿಂತಲೂ ಪುನೀತ್ ರಾಜ್ ಕುಮಾರ್ ಜನತೆಯಿಂದ ಗಳಿಸಿರುವ ಪ್ರೀತಿ- ಅಭಿಯಾನ ದೊಡ್ಡದು ಎಂದಿದ್ದಾರೆ.

https://twitter.com/siddaramaiah/status/1455115374555402244?s=20

ಪುನೀತ್ ರಾಜ್ ಕುಮಾರ್ ಬದುಕಿದ್ದರೆ ತನ್ನ ನಟನೆ ಮತ್ತು ಸಾಮಾಜಿಕ ಕಾಳಜಿಯಿಂದಾಗಿ ಖಂಡಿತ ಪಡೆಯುತ್ತಿದ್ದ ಪದ್ಮಶ್ರಿ ಪ್ರಶಸ್ತಿಯನ್ನು ಅವರಿಗೆ ಮರಣೋತ್ತರವಾಗಿ ನೀಡಬೇಕೇಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮನವಿ ಮಾಡುತ್ತೇನೆ ಎಂದು ಟ್ವೀಟ್ ಮೂಲಕ ತಿಳಿಸಿದ್ದಾರೆ.

Comments are closed.