ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಎಸ್.ಬೊಮ್ಮಾಯಿ ಅವರು ಇಂದು ಬೆಂಗಳೂರಿನ ರವೀಂದ್ರ ಕಲಾ ಕ್ಷೇತ್ರದಲ್ಲಿ ಆಯೋಜಿಸಲಾಗಿದ್ದ 2021ನೇ ಸಾಲಿನ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪಾಲ್ಗೊಂಡು ಸಾಧಕರಿಗೆ ಪ್ರಶಸ್ತಿ ಪ್ರದಾನ ಮಾಡಿದರು.

ಬಳಿಕ ಮಾತನಾಡಿದ ಮುಖ್ಯಮಂತ್ರಿಗಳು, ಪ್ರಶಸ್ತಿ ಮೊತ್ತವನ್ನು 1 ಲಕ್ಷದಿಂದ 5 ಲಕ್ಷಕ್ಕೆ ಹೆಚ್ಚಿಸಲಾಗುವುದು, ಮುಂದಿನ ವರ್ಷದಿಂದ ಇದು ಚಾಲನೆಗೆ ಬರಲಿದೆ. ರಾಜ್ಯೋತ್ಸವ ಪ್ರಶಸ್ತಿಗೆ ವಯಸ್ಸಿನ ಮಿತಿಯನ್ನು 60 ವರ್ಷದಿಂದ ಇಳಿಕೆ ಮಾಡಲಾಗುವುದು. ಈ ಸಂಬಂಧ ನ್ಯಾಯಾಲಕ್ಕೆ ಮನವರಿಕೆ ಮಾಡಕೊಡಲಾಗುವುದು ಹೇಳಿದರು. ಕನ್ನಡ ರಾಜ್ಯೋತ್ಸವ ಮುಂದಿನ ದಿನಗಳಲ್ಲಿ ಕನ್ನಡ ಜನೋತ್ಸವವನ್ನಾಗಿ ಆಚರಿಸಲಾಗುವುದು. ಸರ್ಕಾರವೇ ಪ್ರಶಸ್ತಿ ಅರ್ಹರನ್ನು ಗುರುತಿಸುತ್ತದೆ. ಎರಡು ತಿಂಗಳಿಗಿಂತ ಮುಂಚಿತವಾಗಿ ಆಯ್ಕೆ ಸಮಿತಿ ಸಾಧಕರನ್ನು ಪಟ್ಟಿ ಮಾಡುತ್ತದೆ. ನಂತರ ಸರ್ಕಾರವೇ ಸಾಧಕರನ್ನು ಅಯ್ಕೆ ಮಾಡಿ ಪ್ರಶಸ್ತಿ ನೀಡುತ್ತದೆ ಎಂದರು.
ಕಂದಾಯ ಸಚಿವ ಆರ್.ಅಶೋಕ, ಕನ್ನಡ ಮತ್ತು ಸಂಸ್ಕೃತಿ ಸಚಿವ ವಿ.ಸುನಿಲ್ ಕುಮಾರ್, ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್, ಸಂಸದರಾದ ತೇಜಸ್ವೀ ಸೂರ್ಯ, ಉಮೇಶ್ ಜಾಧವ್, ಶಾಸಕರಾದ ಉದಯ್ ಗರುಡಾಚಾರ್, ಹಿರಿಯ ಸಾಹಿತಿ ಪದ್ಮಶ್ರೀ ಡಾ|| ದೊಡ್ಡರಂಗೇಗೌಡ, ಹಿರಿಯ ಅಧಿಕಾರಿಗಳು ಮತ್ತಿತರರು ಸಮಾರಂಭದಲ್ಲಿ ಉಪಸ್ಥಿತರಿದ್ದರು.
Comments are closed.