ಕರ್ನಾಟಕ

ಪುನೀತ್ ನಿವಾಸಕ್ಕೆ ಭೇಟಿ ನೀಡಿ, ಕುಟುಂಬಸ್ಥರಿಗೆ ಸಾಂತ್ವಾನ ಹೇಳಿದ ಸಿಎಂ ಬೊಮ್ಮಾಯಿ

Pinterest LinkedIn Tumblr

ಬೆಂಗಳೂರು: ಕಳೆದ ಶುಕ್ರವಾರ ನಿಧನರಾದ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ ನಿವಾಸಕ್ಕೆ ಶುಕ್ರವಾರ ಸಂಜೆ ಭೇಟಿ ನೀಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಪುನೀತ್ ಪತ್ನಿ ಅಶ್ವಿನಿ ಸೇರಿದಂತೆ ಕುಟುಂಬಸ್ಥರಿಗೆ ಧೈರ್ಯ ತುಂಬಿದರು.

ಈ ಸಂದರ್ಭ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬೊಮ್ಮಾಯಿ, ನಟ ಪುನೀತ್ ರಾಜ್ ಕುಮಾರ್ ಅವರನ್ನು ಕಳೆದುಕೊಂಡು 8 ದಿನಗಳು ಆಗಿದೆ. ಅವರ ಕುಟುಂಬ ಸದಸ್ಯರನ್ನು ಭೇಟಿ ಮಾಡಿ, ಸಾಂತ್ವನ ಹೇಳಿದ್ದು ಮುಂದೆ ಆಗಬೇಕಿರುವ ಹಲವು ಕಾರ್ಯಕ್ರಮಗಳ ಬಗ್ಗೆ ಚರ್ಚೆ ಮಾಡಿದ್ದೇವೆ. ಮುಂದಿನ ಕಾರ್ಯಗಳ ಬಗ್ಗೆ ಕುಟುಂಬ ಸದಸ್ಯರು ಕುಳಿತು ಚರ್ಚೆ ಮಾಡಿ, ತೀರ್ಮಾನ ಮಾಡುವುದಾಗಿ ಹೇಳಿದ್ದಾರೆ. ಅವರಿಗೆ ಸರ್ಕಾರದಿಂದ ಎಲ್ಲಾ ರೀತಿಯ ಸಹಕಾರ ನೀಡುವುದಾಗಿ ತಿಳಿಸಿದ್ದೇವೆ ಎಂದರು.

ನವೆಂಬರ್ 16ಕ್ಕೆ ಫಿಲ್ಮ್ ಚೇಂಬರ್ ನವರು ಪುನೀತ್ ನೆನಪಿಗಾಗಿ ಕಾರ್ಯಕ್ರಮ ಮಾಡುತ್ತಿದ್ದಾರೆ. ಅದಕ್ಕೆ ಸರ್ಕಾರದಿಂದ ಭದ್ರತೆ ಸೇರಿದಂತೆ ಅಗತ್ಯ ಸಹಕಾರ ಕೊಡುತ್ತೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

Comments are closed.