ಕರ್ನಾಟಕ

ತಿರುಪತಿಯಲ್ಲಿ ನಿರ್ಮಾಣವಾಗುತ್ತಿರುವ 200 ಕೋಟಿ ವೆಚ್ಚದ ಕರ್ನಾಟಕ ಭವನ ಕಟ್ಟಡ ಕಾಮಗಾರಿ ವೀಕ್ಷಿಸಿದ ಸಿಎಂ ಬೊಮ್ಮಾಯಿ

Pinterest LinkedIn Tumblr

ತಿರುಪತಿ: ಶ್ರೀ ಕ್ಷೇತ್ರ ತಿರುಪತಿಯಲ್ಲಿ ನಿರ್ಮಾಣವಾಗುತ್ತಿರುವ ಕರ್ನಾಟಕ ಭವನ ಕಟ್ಟಡದ ನಿರ್ಮಾಣ ಕಾಮಗಾರಿಯನ್ನು ಇಂದು ಕರ್ನಾಟಕ ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪರಿಶೀಲಿಸಿದರು.

ಅಂದಾಜು 200 ಕೋಟಿ ರೂಪಾಯಿ ವೆಚ್ಚದಲ್ಲಿ ಕರ್ನಾಟಕ ಭವನ ನಿರ್ಮಾಣವಾಗುತ್ತಿದ್ದು, ಕಾಮಗಾರಿಯನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸಿ ಕರ್ನಾಟಕ ಭವನವನ್ನು ಶೀಘ್ರವಾಗಿ ಲೋಕಾರ್ಪಣೆಗೊಳಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚಿಸಿದರು.

ಈ ಸಂದರ್ಭ ಸಚಿವರಾದ ಡಾ. ಕೆ ಸುಧಾಕರ್, ಮುನಿರತ್ನ, ಬಿಡಿಎ ಅಧ್ಯಕ್ಷ ಎಸ್ಆರ್ ವಿಶ್ವನಾಥ್, ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಮಂಜುನಾಥ ಪ್ರಸಾದ, ಗುಪ್ತ ವಾರ್ತೆ ಇಲಾಖೆ ಎಡಿಜಿಪಿ ದಯಾನಂದ್, ಟಿಟಿಡಿ ನಿರ್ದೇಶಕ ಎಂ‌ಎನ್ ಶಶಿಧರ ಇದ್ದರು.

Comments are closed.