ಬೆಂಗಳೂರು: ಇತ್ತೀಚೆಚೆಗೆ ಹೃದಯಾಘಾತದಿಂದ ಅಗಲಿದ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಶೃದ್ಧಾಂಜಲಿ ಸಲ್ಲಿಸುವ ಹಿನ್ನೆಲೆಯಲ್ಲಿ ‘ಪುನೀತ್ ನಮನ’ ಹೆಸರಲ್ಲಿ ಇಂದು(ನ.16) ಅರಮನೆ ಮೈದಾನದಲ್ಲಿ ಗಾನ ನಮನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ಈಗಾಗಾಲೇ ಪುನೀತ್ ರಾಜ್ಕುಮಾರ್ಗೆ ಶ್ರದ್ಧಾಂಜಲಿ ಸಲ್ಲಿಸಲು ಫಿಲ್ಮ್ ಚೇಂಬರ್ ಭರ್ಜರಿ ಸಿದ್ಧತೆಗಳನ್ನು ಮಾಡಿಕೊಂಡಿದೆ. ‘ಪುನೀತ್ ನಮನ’ ಕಾರ್ಯಕ್ರಮಕ್ಕೆ ಅರಮನೆ ಮೈದಾನದ ಗಾಯತ್ರಿ ವಿಹಾರದಲ್ಲಿ ಸಿದ್ಧತೆಗಳು ನಡೆಯುತ್ತಿವೆ. ಇಂದುಮಧ್ಯಾಹ್ನ 3 ಗಂಟೆಯಿಂದ ಕಾರ್ಯಕ್ರಮ ಆರಂಭ ಆಗಲಿದ್ದು ಸಂಜೆ 6 ಗಂಟೆವರೆಗೂ ಗೀತ ನಮನ ಹಾಗೂ ನುಡಿ ನಮನ ಸಲ್ಲಿಸಲಾಗುತ್ತಿದೆ.
ವಿಜಯ್ ಪ್ರಕಾಶ್, ರಾಜೇಶ್ ಕೃಷ್ಣನ್ ‘ಗಾನ ನಮನ’
ಪುನೀತ್ ನಮನ ಕಾರ್ಯಕ್ರಮದ ರೂಪು-ರೇಷೆಗಳು ಈಗಾಗಲೇ ಫೈನಲ್ ಆಗಿದೆ. ಡಾ. ನಾಗೇಂದ್ರ ಪ್ರಸಾದ್ ಬರೆದ ಸಾಹಿತ್ಯಕ್ಕೆ ಗುರುಕಿರಣ್ ರಾಗ ಸಂಯೋಜಿಸಿದ್ದಾರೆ. ಈ ಗೀತೆಯ ಮೂಲಕವೇ ಪುನೀತ್ ನಮನ ಕಾರ್ಯಕ್ರಮ ಆರಂಭಗೊಳ್ಳಲಿದೆ. ಸ್ಯಾಂಡಲ್ವುಡ್ ಗಾಯಕರಾದ ವಿಜಯ್ ಪ್ರಕಾಶ್ ಹಾಗೂ ರಾಜೇಶ್ ಕೃಷ್ಣನ್ ತಂಡ ಅಪ್ಪು ಹೆಜ್ಜೆ ಗುರುತನ್ನು ನೆನಪಿಸುವ ಗೀತೆಯನ್ನು ಹಾಡನ್ನು ಗಣ್ಯರ ಮುಂದೆ ಹಾಡಲಿದೆ.
ದೊಡ್ಮನೆ ಇಡೀ ಕುಟುಂಬ ಹಾಗೂ ಸ್ಯಾಂಡಲ್ವುಡ್ ಸೇರಿದಂತೆ ಭಾರತೀಯ ಚಿತ್ರರಂಗದ ಗಣ್ಯರಿಗೆ ಈಗಾಗಲೇ ಆಹ್ವಾನ ನೀಡಲಾಗಿದೆ.
ಪುನೀತ್ ನಮನ ಕಾರ್ಯಕ್ರಮಕ್ಕೆ ಪುನೀತ್ ಅಭಿಮಾನಿಗಳಿಗೆ ಹಾಗೂ ಸಾರ್ವಜನಿಕರಿಗೆ ಆಹ್ವಾನವಿಲ್ಲ. ವಿಐಪಿ ಹಾಗೂ ವಿವಿಐಪಿ ಸಹಿತ ಕೇವಲ 1500 ಪಾಸ್ಗಳನ್ನು ವಿತರಿಸಲಾಗಿದೆ. ಎರಡು ಸಾವಿರ ಮಂದಿಗೆ ಉಪಹಾರದ ವ್ಯವಸ್ಥೆ ಮಾಡಲಾಗಿದೆ. ಪಾಸ್ ಇದ್ದವರಿಗೆ ಮಾತ್ರ ಒಳಬಿಡುವಂತೆ ಕಟ್ಟು ನಿಟ್ಟಿನ ಸೂಚನೆಯನ್ನು ಫಿಲ್ಮ್ ಚೇಂಬರ್ ನೀಡಿದೆ.
Comments are closed.