ಕರ್ನಾಟಕ

ಪುನೀತ್​ ಡ್ರೀಮ್​ ಪ್ರಾಜೆಕ್ಟ್​ ಆಗಿದ್ದ ‘ಗಂಧದ ಗುಡಿ’ ಸಾಕ್ಷ್ಯಚಿತ್ರದ ಟೈಟಲ್ ಟೀಸರ್ ಬಿಡುಗಡೆ

Pinterest LinkedIn Tumblr

ಬೆಂಗಳೂರು: ದಿವಂಗತ ನಟ ಪುನೀತ್ ರಾಜ್‍ಕುಮಾರ್ ಅವರ ಕನಸಿನ ಪ್ರಾಜೆಕ್ಟ್​ ಕನ್ನಡ ನಾಡಿನ ಅರಣ್ಯಸಂಪತ್ತು, ವನ್ಯಜೀವಿ ಸಂಪತ್ತಿನ ಬಗ್ಗೆ ಚಿತ್ರಿಸಿರೋ ‘ಗಂಧದ ಗುಡಿ’ ಸಾಕ್ಷ್ಯಚಿತ್ರದ ಟೈಟಲ್ ಟೀಸರ್ ಇಂದು ಬಿಡುಗಡೆಯಾಗಿದೆ.

ಪಾರ್ವತಮ್ಮ ರಾಜ್ ಕುಮಾರ್ ಅವರ ಹುಟ್ಟುಹಬ್ಬದ ಅಂಗವಾಗಿ ಇಂದು ಬೆಳಗ್ಗೆ ಪಿಆರ್‌ಕೆ ಆಡಿಯೋ ಯೂಟ್ಯೂಬ್ ಚಾನೆಲ್‍ನಲ್ಲಿ ಟೈಟಲ್ ಟೀಸರ್ ಬಿಡುಗಡೆ ಮಾಡಲಾಗಿದೆ.

ಟೀಸರ್ ಅದ್ಬುತವಾಗಿ ಮೂಡಿಬಂದಿದ್ದು, ಅದರಲ್ಲಿ ದಟ್ಟಕಾಡಿನ ನಡುವೆ ಪುನೀತ್ ರಾಜ್‍ಕುಮಾರ್ ಪ್ರಯಾಣಿಸುವುದನ್ನು ಕಾಣಬಹುದಾಗಿದ್ದು, ಆನೆ, ಹುಲಿ, ಹಾವು ಸೇರಿದಂತೆ ಪ್ರಕೃತಿ ಸೌಂದರ್ಯದ ದೃಶ್ಯಗಳು ಅದ್ಭುತವಾಗಿ ಸೆರೆ ಹಿಡಿಯಲಾಗಿದೆ. ಕೊನೆಯಲ್ಲಿ ಡಾ. ರಾಜ್‍ಕುಮಾರ್ ಧ್ವನಿಯಲ್ಲಿರುವ ಅರಣ್ಯವನ್ನು ಉಳಿಸು, ಪ್ರಾಣಿಗಳನ್ನು ಉಳಿಸು ಎಂಬ ಸಂದೇಶ ಸಾರಲಾಗಿದೆ.

ಈ ಕುರಿತು ಅಶ್ವಿನಿ ಪುನೀತ್ ರಾಜ್ ಕುಮಾರ್ ಟ್ವೀಟ್ ಮಾಡಿದ್ದು, ‘ಅಪ್ಪು ಅವರ ಕನಸಿದು, ಅದ್ಭುತ ಪಯಣ, ನಮ್ಮ ನೆಲದ ಘನತೆಯನ್ನು ಮೆರೆಸುವ ಕಥನ, ಮರುಕಳಿಸಿದ ಚರಿತ್ರೆಯಿದು ಗಂಧದ ಗುಡಿ’ ಎಂದು ಬರೆದುಕೊಂಡಿದ್ದಾರೆ.

ಅಮೋಘವರ್ಷ ನಿರ್ದೇಶನದ ಈ ಡಾಕ್ಯುಮೆಂಟರಿ ಸಿನಿಮಾ ಮುಂದಿನ ವರ್ಷ 2022ರಲ್ಲಿ ತೆರೆಕಾಣಲಿದೆ.

 

Comments are closed.