ದಾವಣಗೆರೆ: ದಾವಣಗೆರೆ ಜಿಲ್ಲೆಯ ನ್ಯಾಮತಿ ಬಳಿ ಕೆ.ಎಸ್.ಆರ್.ಟಿಸಿ ಬಸ್ ಹಾಗೂ ಕಾರು ನಡುವೆ ಭೀಕರ ಅಪಘಾತ ಸಂಭವಿಸಿದ್ದು ಅಪಘಾತದಲ್ಲಿ ನಾಲ್ವರು ದುರ್ಮರಣ ಹೊಂದಿದ್ದಾರೆ.
ಸವಳಂಗ ಬಳಿ ಮಧ್ಯಾಹ್ನ ಅಪಘಾತ ಸಂಭವಿಸಿದ್ದು ಕಾರಿನಲ್ಲಿದ್ದ ನಾಲ್ವರು ಮೃತಪಟ್ಟಿದ್ದಾರೆ.

ಕಾರು ಚಾಲಕ ಸುನೀಲ್ (30), ದಾಕ್ಷಾಯಿಣಮ್ಮ (40) ಸುಮಾ (45) ಶಾರದಮ್ಮ (65) ಮೃತ ದುರ್ದೈವಿಗಳಾಗಿದ್ದು ಇವರೆಲ್ಲಾ ಭದ್ರಾವತಿ ಮೂಲದವರು ಎನ್ನಲಾಗಿದೆ. ಇನ್ನು ಗಾಯಗೊಂಡಿರುವ ಇಬ್ಬರನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತರು ಯಡೇಹಳ್ಳಿಯಿಂದ ನ್ಯಾಮತಿ ತಾಲೂಕಿನ ಹಳೇಜೋಗ ಗ್ರಾಮಕ್ಕೆ ಕಾರ್ಯಕ್ರಮವೊಂದಕ್ಕೆ ಕಾರಿನಲ್ಲಿ ಆಗಮಿಸುತ್ತಿದ್ದರು.
ಅಪಘಾತದ ಸ್ಥಳಕ್ಕೆ ಹೊನ್ನಾಳಿ ಸಿಪಿಐ ದೇವರಾಜ್ ಹಾಗೂ ನ್ಯಾಮತಿ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು.
Comments are closed.