ಮುಂಬೈ

ಮಹಾರಾಷ್ಟ್ರ ಮುಖ್ಯಮಂತ್ರಿ ಚವಾಣ್ ರಾಜೀನಾಮೆ

Pinterest LinkedIn Tumblr

PrithviraChavan

ಮುಂಬೈ, ಸೆ. 26: ಹದಿನೈದು ವರ್ಷಗಳ ಮೈತ್ರಿಯಿಂದ ಎನ್‌ಸಿಪಿ ಹಿಂದೆ ಸರಿದ ಒಂದು ದಿನದ ಬಳಿಕ ಮಹಾರಾಷ್ಟ್ರ ಮುಖ್ಯಮಂತ್ರಿ ಪೃಥ್ವಿರಾಜ್ ಚವಾಣ್ ಶುಕ್ರವಾರ ತನ್ನ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ.

ಇಂದು ಸಂಜೆ ರಾಜಭವನಕ್ಕೆ ತೆರಳಿದ ಚವಾಣ್ ತನ್ನ ಸರಕಾರದ ರಾಜೀನಾಮೆ ಪತ್ರವನ್ನು ರಾಜ್ಯಪಾಲ ಸಿ. ವಿದ್ಯಾಸಾಗರ್ ರಾವ್‌ಗೆ ಸಲ್ಲಿಸಿದರು ಎಂದು ಅಧಿಕೃತ ಮೂಲಗಳು ತಿಳಿಸಿವೆ. ಮುಂದಿನ ತಿಂಗಳು ವಿಧಾನಸಭಾ ಚುನಾವಣೆ ನಡೆದು ನೂತನ ಸರಕಾರ ರಚನೆಯಾಗುವವರೆಗೆ ರಾಜ್ಯದ ಉಸ್ತುವಾರಿ ಮುಖ್ಯಮಂತ್ರಿಯಾಗಿ ಮುಂದವರಿಯಲು ಅವರಿಗೆ ಸೂಚಿಸಲಾಗಿದೆಯೇ ಅಥವಾ ಈ ಅವಧಿಗೆ ರಾಜ್ಯದಲ್ಲಿ ರಾಷ್ಟ್ರಪತಿ ಆಡಳಿತ ವಿಧಿಸಲಾಗುವುದೇ ಎಂಬುದು ತಕ್ಷಣಕ್ಕೆ ತಿಳಿದುಬಂದಿಲ್ಲ.

ಎನ್‌ಸಿಪಿ ಗುರುವಾರ ಕಾಂಗ್ರೆಸ್ ಜೊತೆಗಿನ ಮೈತ್ರಿಯನ್ನು ಕಡಿದುಕೊಂಡಿದೆ. ಚವಾಣ್ ತನ್ನನ್ನು ನಿರ್ಲಕ್ಷಿಸುತ್ತಿದ್ದಾರೆ ಹಾಗೂ ಸ್ಥಾನ ಹಂಚಿಕೆ ಕುರಿತ ಮಾತುಕತೆಗಳನ್ನು ತಡೆದಿದ್ದಾರೆ ಎಂದು ಎನ್‌ಸಿಪಿ ಆರೋಪಿಸಿದೆ.

ಮಹಾರಾಷ್ಟ್ರ ವಿಧಾನಸಭೆಯ 288 ಸ್ಥಾನಗಳ ಪೈಕಿ ಕಾಂಗ್ರೆಸ್ ಮತ್ತು ಎನ್‌ಸಿಪಿ ಸಮಾನ ಸಂಖ್ಯೆಯ ಸ್ಥಾನಗಳಲ್ಲಿ ಸ್ಪರ್ಧಿಸಬೇಕು ಹಾಗೂ ಮೈತ್ರಿಕೂಟ ಅಧಿಕಾರಕ್ಕೆ ಬಂದರೆ ಉಭಯ ಪಕ್ಷಗಳು ಮುಖ್ಯಮಂತ್ರಿ ಹುದ್ದೆಯನ್ನು ತಲಾ ಎರಡೂವರೆ ವರ್ಷಗಳ ಅವಧಿಗೆ ಹಂಚಿಕೊಳ್ಳಬೇಕು ಎಂಬ ಬೇಡಿಕೆಯನ್ನು ಎನ್‌ಸಿಪಿ ಮುಂದಿಟ್ಟಿತ್ತು.

Write A Comment