ಮುಂಬಯಿ : ಕುರ್ಲಾ ಬಂಟರ ಭವನದ ಆವರಣದಲ್ಲಿ ಶ್ರೀ ಮಹಾವಿಷ್ಣು ಜ್ನಾನ ಮಂದಿರದ ವಾರ್ಷಿಕ ಜಾತ್ರಾ ಮಹೋತ್ಸವ ಮಾ. 9 ರಿಂದ 11 ರ ತನಕ ವಿವಿಧ ಧಾರ್ಮಿಕ ಕಾರ್ಯಗಳೊಂದಿಗೆ ಜರಗಿತು.
ಕೊಯ್ಯೂರು ನಂದಕುಮಾರ್ ತಂತ್ರಿಗಳ ಮಾರ್ಗದರ್ಶನದೊಂದಿಗೆ ಪೂಜಾ ವಿಧಿಗಳು ನೆರವೇರಿತು. ದುರ್ಗಾ ಪೂಜೆಯಲ್ಲಿ ಬಂಟರ ಸಂಘದ ಅಧ್ಯಕ್ಷ ಕರ್ನಿರೆ ವಿಶ್ವನಾಥ ಶೆಟ್ಟಿ ದಂಪತಿ ಭಾಗವಹಿಸಿ ಪೂಜೆ ಸಲ್ಲಿಸಿದರು.
ಜ್ನಾನ ಮಂದಿರ ಸಮಿತಿಯ ಕಾರ್ಯಾಧ್ಯಕ್ಷ ಬಿ. ಚಂದ್ರಾಹಾಸ ರೈ ಯವರ ನೇತೃತ್ವದಲ್ಲಿ ಜರಗಿದ ಜಾತ್ರಾ ಮಹೋತ್ಸವದಲ್ಲಿ ಬಂಟರ ಸಂಘದ ಹಾಗೂ ಉಪಸಮಿತಿಗಳ ಪದಾಧಿಕಾರಿಗಳು ಪಾಲ್ಗೊಂಡಿದ್ದರು. ಮಂದಿರದ ಪ್ರಧಾನ ಅರ್ಚಕ ವಿದ್ವಾನ್ ಅರವಿಂದ ಬನ್ನಿಂತಾಯ ಪೂಜಾ ವಿಧಿಗಳನ್ನು ನೆರವೇರಿಸಿ ಪ್ರಸಾದ ವಿತರಿಸಿದರು. ಈ ಮಧ್ಯೆ ನಡೆದ ಯಕ್ಷಗಾನ ಪ್ರದರ್ಶನವು ಪ್ರೇಕ್ಷಕರನ್ನು ರಂಜಿಸಿತು.
ವರದಿ : ಈಶ್ವರ ಎಂ. ಐಲ್
ಚಿತ್ರ,: ದಿನೇಶ್ ಕುಲಾಲ್