ಉದ್ಯಮ ನಗರಿ ಮುಂಬೈನಲ್ಲಿ ಅತ್ಯಾಚಾರ ಪ್ರಕರಣಗಳು ಹೆಚ್ಚುತ್ತಿದ್ದು ಇದಕ್ಕೆ ನಿದರ್ಶನವೆಂಬಂತೆ ನಿವೃತ್ತ ಮಿಲಿಟರಿ ಅಧಿಕಾರಿಯೊಬ್ಬ ಹತ್ತು ವರ್ಷದ ಬಾಲಕಿಯನ್ನು ತನ್ನ ಕಾರಿನಲ್ಲಿ ಕರೆದೊಯ್ದು ಲೈಂಗಿಕ ಕಿರುಕುಳ ನೀಡಿದ ಅಮಾನವೀಯ ಘಟನೆ ಬೆಳಕಿಗೆ ಬಂದಿದೆ.
ಮುಂಬೈನ ಪೂರ್ವ ಮಲಾಡ್ ನಿವಾಸಿ ಸುಧೀರ್ ಪ್ರಕಾಶ್ ಅರೋರಾ ಎಂಬ 78 ವರ್ಷದ ಈ ಮುದುಕ ತನ್ನ ಪರಿಚಯಸ್ಥರ ಹತ್ತು ವರ್ಷದ ಮಗಳನ್ನು ಸುತ್ತಾಡಲು ಕರೆದೊಯ್ಯುತ್ತೇನೆ ಎಂದು ತಿಳಿಸಿ ತನ್ನ ಕಾರಿನಲ್ಲಿ ಕರೆದೊಯ್ದು ನಿರ್ಜನ ಪ್ರದೇಶವೊನ್ದರಲ್ಲಿ ಕಾರನ್ನು ನಿಲ್ಲಿಸಿ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿ ಆಕೆಯ ಮನೆಗೆ ಕರೆತಂದು ಬಿಟ್ಟಿದ್ದಾನೆ. ಮನೆಗೆ ಬಂದ ಬಾಲಕಿ ಈ ವಿಷಯವನ್ನು ತನ್ನ ತಾಯಿ ಬಳಿ ತಿಳಿಸಿದ್ದು ತಕ್ಷಣ ತಾಳಿ ಮಗಳನ್ನು ಕರೆದುಕೊಂಡು ಹೋಗಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾಳೆ.
ಇದರಿಂದ ಆಕ್ರೋಶಗೊಂಡ ಈ ಕಾಮುಕ ದೂರನ್ನು ಹಿಂದಕ್ಕೆ ಪಡೆಯುವಂತೆ ಬೆದರಿಕೆ ಹಾಕಿದ್ದು ಅಷ್ಟರಲ್ಲಿಯೇ ಬಂದ ಪೊಲೀಸರು ಆತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.