ಮುಂಬೈ

ಐಪಿಎಲ್ ಗೆ ಮತ್ತೆ ಕಾಡುತ್ತಿದೆ ಮ್ಯಾಚ್ ಫಿಕ್ಸಿಂಗ್ ಭೂತ

Pinterest LinkedIn Tumblr

IPL-Fix

ಚೆನ್ನೈ, ಮೇ 14-ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್)ನ  8ನೇ ಆವೃತ್ತಿಯಲ್ಲಿ ಮತ್ತೆ ಮ್ಯಾಚ್ ಫಿಕ್ಸಿಂಗ್ ಭೂತ  ಕಾಟ ಶುರುವಾಗಿದೆ. ಚೆನ್ನೈ ಸೂಪರ್ ಕಿಂಗ್ಸ್‌ನ ಹಾಲಿ ನಾಲ್ವರು ಆಟಗಾರರು ಮ್ಯಾಚ್ ಫಿಕ್ಸಿಂಗ್‌ನಲ್ಲಿ ಭಾಗಿಯಾಗಿದ್ದಾರೆ ಎಂದು ಮಾಜಿ ಐಪಿಎಲ್ ಆಯುಕ್ತ ಲಲಿತ್ ಮೋದಿ ಹೊಸ ಬಾಂಬ್ ಸಿಡಿಸಿದ್ದಾರೆ. ದೇಶೀಯ ಕ್ರಿಕೆಟ್‌ನಲ್ಲಿ ಲಲಿತ್‌ಮೋದಿ ಹೇಳಿಕೆ ಭಾರೀ ಅಲ್ಲೋಲ-ಕಲ್ಲೋಲ ಸೃಷ್ಟಿಸಿದೆ. ಮ್ಯಾಚ್ ಫಿಕ್ಸಿಂಗ್‌ನಲ್ಲಿ ಯಾವ ಆಟಗಾರರು ಭಾಗಿಯಾಗಿದ್ದಾರೆ ಎಂಬುದರ ಬಗ್ಗೆ ಹೆಸರುಗಳನ್ನು ಅವರು ಬಹಿರಂಗಪಡಿಸಿಲ್ಲ.

ಚೆನ್ನೈನ ನಾಲ್ವರು ಆಟಗಾರರು ಮ್ಯಾಚ್ ಫಿಕ್ಸಿಂಗ್‌ನಲ್ಲಿ ಭಾಗಿಯಾಗಿರುವುದಕ್ಕೆ ನನ್ನ ಬಳಿ ಸಾಕ್ಷಿಗಳಿವೆ. ಅಂತಾರಾಷ್ಟ್ರೀಯ ಮಟ್ಟದ ಬುಕ್ಕಿಯೊಬ್ಬ ಇದನ್ನು ವ್ಯವಸ್ಥಿತವಾಗಿ ನಿರ್ವಹಣೆ ಮಾಡುತ್ತಿದ್ದಾನೆ. ಕೋಟಿ ಕೋಟಿ ಹಣದ ವಹಿವಾಟು ನಡೆದಿದೆ ಎಂದು ಮೋದಿ ಆಪಾದಿಸಿದ್ದಾರೆ.

ನಾನು ಯಾರನ್ನೂ ಗುರಿಯಾಗಿಟ್ಟುಕೊಂಡು ಸುಳ್ಳು ಆಪಾದನೆ ಮಾಡುತ್ತಿಲ್ಲ. ನಾಲ್ವರು ಆಟಗಾರರು ಮ್ಯಾಚ್ ಫಿಕ್ಸಿಂಗ್‌ನಲ್ಲಿ ಭಾಗಿಯಾಗಿರುವುದಕ್ಕೆ ದಾಖಲೆಗಳ ಸಮೇತ ಬಹಿರಂಗಪಡಿಸಲು ಸಿದ್ಧನಿದ್ದೇನೆ. 100 ಕೋಟಿ ರೂ. ಅಧಿಕ ವಹಿವಾಟು ನಡೆದಿರುವ ಸಾಧ್ಯತೆ ಇದೆ ಎಂದು ಅನುಮಾನ ವ್ಯಕ್ತಪಡಿಸಿದ್ದಾರೆ. ಆದರೆ ಲಲಿತ್ ಮೋದಿ ಹೇಳಿಕೆಯನ್ನು ಕಾರ್ಯದರ್ಶಿ ಅನುರಾಗ್ ಠಾಕೂರ್ ನಿರಾಕರಿಸಿದ್ದಾರೆ. ಲಲಿತ್ ಮೋದಿ ಐಪಿಎಲ್‌ಗೆ ಕಪ್ಪು ಚುಕ್ಕೆ ತರಬೇಕೆಂಬ ಉದ್ದೇಶದಿಂದ ಇಂತಹ ಸುಳ್ಳು ಆಪಾದನೆ ಮಾಡಿದ್ದಾರೆ. ಯಾವೊಬ್ಬ ಆಟಗಾರರೂ ಮ್ಯಾಚ್ ಫಿಕ್ಸಿಂಗ್‌ನಲ್ಲಿ ಭಾಗಿಯಾಗಿರುವುದಕ್ಕೆ ಸಾಕ್ಷಿಗಳಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಭಾರತದಲ್ಲಿ ಐಪಿಎಲ್‌ಗೆ ಜಾಗತಿಕ ಮನ್ನಣೆ ತಂದುಕೊಟ್ಟವರು ಇದೇ ಲಲಿತ್ ಮೋದಿ. ಮ್ಯಾಚ್ ಫಿಕ್ಸಿಂಗ್‌ನಲ್ಲಿ ಭಾಗಿಯಾಗಿದ್ದರು ಎಂಬ ಕಾರಣಕ್ಕಾಗಿಯೇ ಅವರನ್ನು ಬಿಸಿಸಿಐ ಐಪಿಎಲ್‌ನಿಂದ ವಜಾಗೊಳಿಸಿತ್ತು. ಪ್ರಸ್ತುತ ಲಂಡನ್‌ನಲ್ಲಿರುವ ಮೋದಿ ಭಾರತಕ್ಕೆ ಪ್ರವೇಶಿಸಬೇಕಾದರೆ ನ್ಯಾಯಾಲಯದ ಅನುಮತಿ ಪಡೆಯಬೇಕು.

Write A Comment