ಮುಂಬೈ

ಗೋಹತ್ಯೆ ನಿಷೇಧ: ಎನ್ ಸಿಪಿ ನಾಯಕ ಗಣೇಶ್ ನಾಯ್ಕ್ ಕಾರು ಚಾಲಕ ಸೇರಿ ಮೂವರ ಬಂಧನ

Pinterest LinkedIn Tumblr

cows---PTI

ಮುಂಬೈ: ಅಕ್ರಮವಾಗಿ ಗೋಮಾಂಸ ಸಾಗಿಸುತ್ತಿದ್ದ ಅಡ್ಡೆ ಮೇಲೆ ಮಹಾರಾಷ್ಟ್ರ ಪೊಲೀಸರು ದಾಳಿ ಮಾಡಿದ್ದು, ಎನ್ ಸಿಪಿ ನಾಯಕ ಗಣೇಶ್ ನಾಯ್ಕ್ ಅವರ ವಾಹನ ಚಾಲಕ ಸೇರಿದಂತೆ ಮೂವರು ಆರೋಪಿಗಳನ್ನು ಶುಕ್ರವಾರ ಬಂಧಿಸಿದ್ದಾರೆ.

ಮುಂಬೈನ ಕೋಪರ್ ಖಾನೆ ಪ್ರದೇಶದಲ್ಲಿ ಅಕ್ರಮವಾಗಿ ಗೋಮಾಂಸವನ್ನು ಸಾಗಿಸಲಾಗುತ್ತಿತ್ತು. ಈ ಬಗ್ಗೆ ಮಾಹಿತಿ ತಿಳಿದ ಮಹಾರಾಷ್ಟ್ರ ಪೊಲೀಸರು ದಾಳಿ ನಡೆಸಿದ್ದಾರೆ. ಈ ವೇಳೆ ಸ್ಥಳದಲ್ಲಿದ್ದ ಎನ್ ಸಿಪಿ ನಾಯಕ ಗಣೇಶ್ ನಾಯ್ಕ್ ಅವರ ವಾಹನ ಚಾಲಕ ಸೇರಿದಂತೆ ಅವರ ಜೊತೆಯಲ್ಲಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ಆರೋಪಿಗಳ ವಿರುದ್ಧ ಮಹಾರಾಷ್ಟ್ರ ಪ್ರಾಣಿ ಸಂರಕ್ಷಣಾ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಾಗಿದೆ ಎಂದು ತಿಳಿದುಬಂದಿದೆ.

ಪರ-ವಿರೋಧದ ನಡುವೆಯೂ ಮಹಾರಾಷ್ಟ್ರ ಸರ್ಕಾರ ಮಾರ್ಚ್ 3 ರಂದು ಮಹಾರಾಷ್ಟ್ರ ಜಾನುವಾರು ಸಂರಕ್ಷಣಾ ಕಾಯ್ದೆಯಡಿ ಗೋಹತ್ಯೆ ಮಾಡುವವರ ವಿರುದ್ಧ ನಿಷೇಧ ಹೇರಿತ್ತು. ಕಾಯ್ದೆ ಪ್ರಕಾರ ಗೋ ಮಾಂಸ ಮಾರಾಟ ಮಾಡುವವರ ವಿರುದ್ಧ 5 ವರ್ಷಗಳ ಕಾಲ ಕಠಿಣ ಜೈಲು ಶಿಕ್ಷೆ ಹಾಗೂ 10 ಸಾವಿರ ದಂಡ ತೆರುವಂತೆ ಮಹಾರಾಷ್ಟ್ರ ಸರ್ಕಾರ ಗೋಹತ್ಯೆ ಮಾಡುವವರ ವಿರುದ್ಧ ಕ್ರಮ ತೆಗೆದುಕೊಂಡಿತ್ತು.

ಮಹಾರಾಷ್ಟ್ರ ಸರ್ಕಾರದ ಈ ನಿರ್ಧಾರಕ್ಕೆ ವಿರುದ್ಧ ಹಲವು ರಾಜಕೀಯ ಪಕ್ಷದ ನಾಯಕರು ಹಾಗೂ ಸಾರ್ವಜನಿಕರು ಪ್ರತಿಭಟನೆಗಳನ್ನು ನಡೆದ್ದವು. ಆಹಾರ ಆಯ್ಕೆಯಲ್ಲಿ ಪ್ರತಿಯೊಬ್ಬರಲ್ಲೂ ವಿಭಿನ್ನತೆ ಇರುತ್ತದೆ. ಈ ರೀತಿಯ ನಿಷೇಧದಿಂದ ಜನರ ಆಹಾರ ಪದ್ಧತಿಯ ಮೇಲೆ ಹೊಡೆತ ಬೀಳಲಿದೆ ಎಂದು ವಿರೋಧ ವ್ಯಕ್ತಪಡಿಸಿದ್ದವು.

Write A Comment