ಮುಂಬೈ: ರೂಪದರ್ಶಿ ಶಿಖಾ ಜೋಶಿ ಅವರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದು, ಕತ್ತು ಸೀಳಿರುವ ಸ್ಥಿತಿಯಲ್ಲಿ ಅವರ ಮೃತದೇಹ ಅಂಧೇರಿ ಅಪಾರ್ಟ್ ಮೆಂಟ್ ನಲ್ಲಿ ಪತ್ತೆಯಾಗಿದೆ.
30 ವರ್ಷದ ಮಾಡೆಲ್ ಶಿಖಾ ಜೋಶಿ ಅಂಧೇರಿಯ ಅಪಾರ್ಟ್ ಮೆಂಟ್ ನಲ್ಲಿ ವಾಸವಾಗಿದ್ದರು. ಇಂದು ಅವರ ಶವ ಪತ್ತೆಯಾಗಿದ್ದು, ಕಳೆದ ರಾತ್ರಿಯೇ ನಟಿ ಮೃತಪಟ್ಟಿರುವ ಬಗ್ಗೆ ಪೊಲೀಸರು ತಿಳಿಸಿದ್ದಾರೆ.
ಕತ್ತು ಸೀಳಿರುವ ಸ್ಥಿತಿಯಲ್ಲಿ ಶಿಖಾ ಜೋಶಿ ಶವ ಪತ್ತೆಯಾಗಿರುವುದರಿಂದ ಇದು ಕೊಲೆಯೋ, ಆತ್ಮಹತ್ಯೆಯೋ ಎಂದು ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ. ಒಂದು ಕಡೆ ಪರಿಚಯಸ್ಥರೇ ಅವರ ಕತ್ತು ಸೀಳಿ ಕೊಲೆ ಮಾಡಿರಬಹುದೆಂದು ಶಂಕೆ ವ್ಯಕ್ತಪಡಿಸಿದ್ದಾರೆ.
ಪ್ರಕರಣ ದಾಖಲಿಸಿಕೊಂಡಿರುವ ಅಂಧೇರಿಯ ಪೊಲೀಸ್ ಅಧಿಕಾರಿಗಳು ಶಿಖಾ ಜೋಶಿ ಅವರ ಸಾವಿನ ಬಗ್ಗೆ ತನಿಖೆ ಕೈಗೊಂಡಿದ್ದು, ಅಪಾರ್ಟ್ ಮೆಂಟ್ ಹಾಗೂ ಸುತ್ತಮುತ್ತಲಿನ ಸಿಸಿಟಿವಿಗಳನ್ನು ವಶಕ್ಕೆ ಪಡೆದು ಪರಿಶೀಲನೆ ನಡೆಸುತ್ತಿದ್ದಾರೆ.
