ಮುಂಬೈ ಸರಣಿ ಸ್ಪೋಟದ ಅಪರಾಧಿ ಯಾಕುಬ್ ಮೆಮನ್ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಗಲ್ಲು ಶಿಕ್ಷೆ ಅರ್ಜಿಯನ್ನು ತಿರಸ್ಕರಿಸಿದ್ದು, ಲಭ್ಯ ಮಾಹಿತಿ ಪ್ರಕಾರ ಗುರುವಾರ ಬೆಳಿಗ್ಗೆ ಏಳು ಘಂಟೆಗೆ ಗಲ್ಲಿಗೇರಿಸುವುದು ಖಚಿತವಾಗಿದೆ.
ಯಾಕುಬ್ ಸಲ್ಲಿಸಿದ ಅರ್ಜಿಯ ಸುದೀರ್ಘ ವಿಚಾರಣೆ ನಡೆಸಿದ ನ್ಯಾ. ದೀಪಕ್ ಮಿಶ್ರಾ, ನ್ಯಾ. ಅಮಿತವ್ ರಾಯ್ ಮತ್ತು ನ್ಯಾ. ಪ್ರಫುಲ್ಲ ಪಂತ್ ಅವರನ್ನೊಳಗೊಂಡ ವಿಸ್ತ್ರತ ತ್ರಿಸದಸ್ಯ ಪೀಠ ಅಂತಿಮವಾಗಿ ಗಲ್ಲು ಶಿಕ್ಷೆಗೆ ಆದೇಶ ನೀಡಿದೆ. ಈ ನಡುವೆ ಮಹಾರಾಷ್ಟ್ರ ರಾಜ್ಯಪಾಲ ವಿದ್ಯಾಸಾಗರ್ ಅವರೂ ಯಾಕುಬ್ ಮೆಮನ್ ಅರ್ಜಿಯನ್ನು ತಿರಸ್ಕರಿಸಿದ್ದಾರೆ.
ಈ ಎಲ್ಲ ಹಿನ್ನೆಲೆಯಲ್ಲಿ ಮುಂಬೈ ದಾಳಿ ಪ್ರಕರಣದ ಅಪರಾಧಿ ಯಾಕುಬ್ನನ್ನು ಆತನ ಹುಟ್ಟಿದ ದಿನವಾದ ಗುರುವಾರ(ಜುಲೈ 30, ) ಬೆಳಗ್ಗೆ ಏಳು ಘಂಟೆಗೆ ನಾಗ್ಪುರ ಕೇಂದ್ರ ಕಾರಾಗೃಹದಲ್ಲಿ ಗಲ್ಲಿಗೇರಿಸಲಾಗುತ್ತಿದೆ ಎಂಬ ಮಾಹಿತಿ ಲಭ್ಯವಾಗಿದೆ.