ಮುಂಬೈ

ರಾಧೆ ಮಾ ಜಾಮೀನು ಅರ್ಜಿ ವಜಾ, ದೇವ ಮಹಿಳೆಗೆ ಬಂಧನ ಭೀತಿ

Pinterest LinkedIn Tumblr

radhema13ಮುಂಬೈ: ವರದಕ್ಷಿಣೆ ಕಿರುಕುಳ ಆರೋಪ ಎದುರಿಸುತ್ತಿರುವ ವಿವಾದಿತ ಸ್ವಯಂ ಘೋಷಿತ ದೇವ ಮಹಿಳೆ ರಾಧೆ ಮಾಗೆ ನಿರೀಕ್ಷಣಾ ಜಾಮೀನು ನೀಡಲು ಮುಂಬೈ ಕೋರ್ಟ್ ನಿರಾಕರಿಸಿದೆ.

ಬಂಧನ ಭೀತಿಯಲ್ಲಿರುವ ರಾಧೆ ಮಾ ನಿರೀಕ್ಷಣಾ ಜಾಮೀನು ಕೋರಿ ಬಾಂಬೆ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದರು. ಇಂದು ಅರ್ಜಿಯ ವಿಚಾರಣೆ ನಡೆಸಿದ ಕೋರ್ಟ್, ಜಾಮೀನು ನೀಡಲು ನಿರಾಕರಿಸಿದೆ.

50 ವರ್ಷದ ರಾಧೆ ಮಾ ವಿರುದ್ಧ ಮಹಿಳೆಯೊಬ್ಬರು ವರದಕ್ಷಿಣೆ ಕಿರುಕುಳ ಕೇಸ್ ದಾಖಲಿಸಿದ್ದರು. ದೇವ ಮಹಿಳೆ ಸೂಚನೆ ಮೇರೆಗೆ ನನ್ನ ಗಂಡನ ಮನೆಯವರು ನನಗೆ ಮಾನಸಿಕವಾಗಿ ಹಿಂಸೆ ನೀಡಿದ್ದರಲ್ಲದೇ, ದೈಹಿಕವಾಗಿ ಹಲ್ಲೆ ನಡೆಸಿದ್ದಾರೆ. ಇದೀಗ ನನ್ನ ಪತಿ ವರದಕ್ಷಿಣೆ ಕಿರುಕುಳ ನೀಡುತ್ತಿದ್ದು, ನನ್ನ ಪೋಷಕರಿಗೆ ಜೀವ ಬೆದರಿಕೆ ಹಾಕಿದ್ದಾರೆ. ಇದರಲ್ಲಿ ರಾಧೆ ಮಾ ಅವರ ಕೈ ವಾಡಿ ಇದೆ ಎಂದು ಬೊರಿವಲಿ ಪೊಲೀಸ್ ಠಾಣೆಗೆ ದೂರು ನೀಡಿದ್ದರು.

ಈ ಸಂಬಂಧ ಪೊಲೀಸರು ಈಗಾಗಲೇ ರಾಧೆ ಮಾಗೆ ನೋಟಿಸ್ ಜಾರಿ ಮಾಡಿದ್ದು, ನಾಳೆ ಅವರನ್ನು ವಿಚಾರಣೆಗೆ ಒಳಪಡಿಸುವ ಸಾಧ್ಯತೆ ಇದೆ.

Write A Comment