ಮುಂಬೈ

ನಿತೀಶ್ ಕುಮಾರ್ ರಾಜಕೀಯ ಹೀರೊ; ಸೋಲಿಗೆ ಮೋದಿಯೇ ನೇರ ಹೊಣೆ: ಬಿಜೆಪಿ ಮಿತ್ರ ಪಕ್ಷ ಶಿವಸೇನೆ

Pinterest LinkedIn Tumblr

BJP-shiv sene

ಮುಂಬೈ: ಬಿಹಾರ ಚುನಾವಣಾ ಫಲಿತಾಂಶದಲ್ಲಿ ಮಹಾ ಮೈತ್ರಿಕೂಟ ಮುನ್ನಡೆ ಸಾಧಿಸಿ, ನಿತೀಶ್ ಕುಮಾರ್ ಮತ್ತೊಮ್ಮೆ ಬಿಹಾರ ಮುಖ್ಯಮಂತ್ರಿಯಾಗುವುದು ಖಚಿತವಾಗಿದೆ. ಈ ಬಗ್ಗೆ ಬಿಜೆಪಿ ಮಿತ್ರ ಪಕ್ಷ ಶಿವಸೇನೆ ಪ್ರತಿಕ್ರಿಯೆ ನೀಡಿದ್ದು, ಬಿಹಾರ ಚುನಾವಣೆಯಲ್ಲಿ ನಿತೀಶ್ ಕುಮಾರ್ ರಾಜಕೀಯ ಹೀರೊ (ನಾಯಕನಾಗಿ) ಹೊರಹೊಮ್ಮಿದ್ದಾರೆ ಎಂದು ಹೇಳಿದೆ.

ಚುನಾವಣೆಯಲ್ಲಿ ಹಿನ್ನಡೆ ಕಂಡಿರುವ ಬಿಜೆಪಿ ಆತ್ಮಾವಲೋಕನ ಮಾಡಿಕೊಳ್ಳಬೇಕಿದೆ ಎಂದು ಸಲಹೆ ನೀಡಿರುವ ಶಿವಸೇನೆ ನಾಯಕ, ಚುನಾವಣೆಯಲ್ಲಿ ನಿತೀಶ್ ಕುಮಾರ್ ರಾಜಕೀಯ ಹೀರೊ ಆಗಿ ಹೊರಹೊಮ್ಮಿದ್ದಾರೆ ಎಂದು ಹೇಳಿದ್ದಾರೆ. ಅಲ್ಲದೇ ಬಿಹಾರದ ಬಿಜೆಪಿ ಸೋಲಿಗೆ ಪ್ರಧಾನಿ ನರೇಂದ್ರ ಮೋದಿ ಅವರೇ ನೇರ ಹೊಣೆಯಾಗಿದ್ದು, ಅವರ ನಾಯಕತ್ವದಿಂದಲೇ ಪಕ್ಷಕ್ಕೆ ಸೋಲುಂಟಾಗಿದೆ ಎಂದು ಆರೋಪಿಸಿದೆ.

ಫಲಿತಾಂಶದ ಬಗ್ಗೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಾತನಾಡಿದ್ದು, ಬಿಹಾರದ ಚುನಾವಣಾ ಫಲಿತಾಂಶ ಸಹಿಷ್ಣುತೆಗೆ ದೊರೆತ ಜಯ ಎಂದು ಹೇಳಿದ್ದರೆ, ದೆಹಲಿ ಸಿಎಂ ಕೇಜ್ರಿವಾಲ್ ನಿತೀಶ್ ಕುಮಾರ್ ಗೆ ಅಭಿನಂದನೆ ಸಲ್ಲಿಸಿದ್ದಾರೆ.

Write A Comment