ಮುಂಬೈ

ಶೀನಾ ಬೋರಾ ಕೊಲೆಗೆ ಹಣಕಾಸಿನ ವ್ಯವಹಾರ ಕಾರಣ: ಕೋರ್ಟ್‌ಗೆ ಸಿಬಿಐ

Pinterest LinkedIn Tumblr

peterಮುಂಬೈ: ಶೀನಾ ಬೋರಾ ಕೊಲೆಗೆ ಹಣಕಾಸಿನ ವ್ಯವಹಾರ ಕಾರಣ ಎಂದು ಪ್ರಕರಣ ತನಿಖೆ ನಡೆಸುತ್ತಿರುವ ಸಿಬಿಐ ಸೋಮವಾರ ಕೋರ್ಟ್‌ಗೆ ತಿಳಿಸಿದೆ.

ಹಣಕಾಸಿನ ವ್ಯವಹಾರದ ಕುರಿತು ತನಿಖೆ ನಡೆಸಲು ಪ್ರಕರಣದ ಪ್ರಮುಖ ಆರೋಪಿ ಇಂದ್ರಾಣಿ ಮುಖರ್ಜಿ ಪತಿ ಹಾಗೂ ಟಿವಿ ವಾಹಿನಿಯ ಮಾಜಿ ಕಾರ್ಯನಿರ್ವಾಹಕ ಅಧಿಕಾರಿ ಪೀಟರ್ ಮುಖರ್ಜಿಯನ್ನು ಮತ್ತೆ 10 ದಿನಗಳ ಕಾಲ ತಮ್ಮ ವಶಕ್ಕೆ ನೀಡುವಂತೆ ಸಿಬಿಐ ವಿಶೇಷ ಕೋರ್ಟ್‌ಗೆ ಮನವಿ ಮಾಡಿತು.

ಇಂದ್ರಾಣಿ ಮುಖರ್ಜಿ ಶೀನಾ ಬೋರಾ ಇಮೇಲ್ ಚೆಕ್ ಮಾಡುತ್ತಿದ್ದ ಸಂದರ್ಭದಲ್ಲಿ ಪೀಟರ್ ಮುಖರ್ಜಿ ಇರುತ್ತಿದ್ದರು. ಈ ಕೊಲೆಗೆ ಹಣಕಾಸಿನ ವ್ಯವಹಾರ ಪ್ರಮುಖ ಕಾರಣವಾಗಿದ್ದು, ಈ ಬಗ್ಗೆ ಹೆಚ್ಚಿನ ತನಿಖೆ ನಡೆಸುವ ಅಗತ್ಯವಿದೆ. ಹೀಗಾಗಿ ಪೀಟರ್ ಮುಖರ್ಜಿಯನ್ನು ಮತ್ತೆ 10ದಿನಗಳ ಕಾಲ ನಮ್ಮ ವಶಕ್ಕೆ ನೀಡವಂತೆ ಸಿಬಿಐ ಮನವಿ ಮಾಡಿತು. ಆದರೆ ಇದಕ್ಕೆ ಒಪ್ಪದ ಕೋರ್ಟ್ ಆರೋಪಿಯನ್ನು ಕೇವಲ 3 ದಿನಗಳ ಕಾಲ ಸಿಬಿಐ ವಶಕ್ಕೆ ನೀಡಿದೆ.

ಪೀಟರ್ ಮುಖರ್ಜಿ ವಿರುದ್ಧ ಕೊಲೆ ಪ್ರಕರಣ ದಾಖಲಿಸಿದ್ದ ಸಿಬಿಐ ಕಳೆದ ಶುಕ್ರವಾರ ಆರೋಪಿಯನ್ನು ಬಂಧಿಸಿ ವಿಚಾರಣೆ ನಡೆಸುತ್ತಿದೆ.

ಏಪ್ರಿಲ್, 2012ರಲ್ಲಿ ಕಣ್ಮರೆಯಾಗಿದ್ದ ಶೀನಾ ಬೋರಾಳ ಶವ ಮುಂಬೈನ ರಾಯ್ ಗಢ ಅರಣ್ಯದಲ್ಲಿ ಪತ್ತೆಯಾಗಿತ್ತು. ತಾಯಿ-ಮಗಳ ಮಧ್ಯೆ ಹಣಕಾಸಿನ ಭಿನ್ನಾಭಿಪ್ರಾಯದಿಂದ ಇಂದ್ರಾಣಿ ಶೀನಾ ಬೋರಾಳನ್ನು ಹತ್ಯೆ ಮಾಡಿರಬಹುದು ಎಂದು ಮೇಲ್ನೋಟಕ್ಕೆ ಕಂಡುಬಂದಿತ್ತು. ಈಗ ಅದು ನಿಜವಾಗುತ್ತಿದೆ.

Write A Comment