ಮುಂಬೈ

ಶೀನಾ ಕೊಲೆ ಪ್ರಕರಣ: ಪೀಟರ್ ಮುಖರ್ಜಿಗೆ ನ್ಯಾಯಾಂಗ ಬಂಧನ

Pinterest LinkedIn Tumblr

peter-28ಮುಂಬೈ: ಶೀನಾ ಬೋರಾ ಕೊಲೆ ಪ್ರಕರಣದ ಪ್ರಮುಖ ಆರೋಪಿಗಳಲ್ಲಿ ಒಬ್ಬರಾದ ಟಿವಿ ವಾಹಿನಿಯ ಮಾಜಿ ಕಾರ್ಯನಿರ್ವಾಹಕ ಅಧಿಕಾರಿ ಪೀಟರ್ ಮುಖರ್ಜಿ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಕಳೆದ ನವೆಂಬರ್ 19ರಿಂದ ಸಿಬಿಐ ವಶದಲ್ಲಿದ್ದ ಪೀಟರ್ ಮುಖರ್ಜಿಯನ್ನು ಸಿಬಿಐ ವಿಶೇಷ ಕೋರ್ಟ್ ಹಾಜರುಪಡಿಸಲಾಯಿತು. ವಿಚಾರಣೆ ನಡೆಸಿದ ಕೋರ್ಟ್ ಡಿಸೆಂಬರ್ 14ರವರೆಗೆ ನ್ಯಾಯಾಂಗ ಬಂಧನಕ್ಕೆ ಆದೇಶಿಸಿದೆ.

ಶೀನಾ ಬೋರಾ ಕೊಲೆ ಪ್ರಕರಣ ಸಂಬಂಧ ಪೀಟರ್ ಮುಖರ್ಜಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ ಸಿಬಿಐ, ಮಾಧ್ಯಮ ದೊರೆಯ ವಿರುದ್ಧ ಕೊಲೆ ಯತ್ನ, ಅಪಹರಣ ಹಾಗೂ ಅಪರಾಧಕ್ಕೆ ಸಂಚು ರೂಪಿಸಿದ ಆರೋಪ ಹೊರಿಸಿದೆ.

59 ವರ್ಷದ ಪೀಟರ್ ಮುಖರ್ಜಿಯ ಪತ್ನಿ ಇಂದ್ರಾಣಿ ಮುಖರ್ಜಿ ಶೀನಾ ಬೋರಾ ಕೊಲೆ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿದ್ದು, ಕಳೆದ ಆಗಸ್ಟ್‌ನಲ್ಲಿ ಬಂಧಿಸಲಾಗಿತ್ತು.

Write A Comment