ಮುಂಬೈ: ಮಾಡೆಲ್ ಮೇಲಿನ ಅತ್ಯಾಚಾರ ಆರೋಪಕ್ಕೆ ಗುರಿಯಾಗಿದ್ದ ಮುಂಬೈನ ಹಿರಿಯ ಐಪಿಎಸ್ ಅಧಿಕಾರಿ ಸುನೀಲ್ ಪಾರಸ್ಕರ್ ಅವರಿಗೆ ಸೆಷನ್ಸ್ ಕೋರ್ಟ್ ರಿಲೀಫ್ ನೀಡಿದೆ.
ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಸೆಷನ್ಸ್ ಕೋರ್ಟ್ ಪಾರಸ್ಕರ್ ಅವರನ್ನು ಪ್ರಕರಣದಿಂದ ಖುಲಾಸೆ ಮಾಡಿದೆ.
ಈ ಬಗ್ಗೆ ಪ್ರತಿಕ್ರಿಯಿಸಿರುವ ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ಪ್ರದೀಪ್ ಗರತ್ ಅವರು ಸೆಷನ್ಸ್ ಕೋರ್ಟ್ ತೀರ್ಪನ್ನು ಬಾಂಬೈ ಹೈಕೋರ್ಟ್ ನಲ್ಲಿ ಪ್ರಶ್ನಿಸಲಾಗುವುದು ಎಂದು ಹೇಳಿದ್ದಾರೆ.
ಕಳೆದ ಮೇ ತಿಂಗಳಲ್ಲಿ ಪಾರಸ್ಕರ್ ವಿರುದ್ಧ ಮುಂಬೈ ಪೊಲೀಸರು 724 ಪುಟಗಳ ಚಾರ್ಜ್ ಶೀಟ್ ಸಲ್ಲಿಸಿದ್ದರು.
2014ರ ಜುಲೈನಲ್ಲಿ ಮಾಡೆಲ್ ಮೇಲೆ ಅತ್ಯಾಚಾರ ನಡೆಸಿದ ಆರೋಪದ ಮೇಲೆ ಸುನೀಲ್ ಪಾರಸ್ಕರ್ ಅಮಾನುಗೊಂಡಿದ್ದರು.