
ಮುಂಬೈ: ಬಾಲಿವುಡ್ ಸೂಪರ್ ಸ್ಟಾರ್ ಸಲ್ಮಾನ್ ಖಾನ್ ಅವರಿಗೆ ಜೀವ ಬೆದರಿಕೆ ಕರೆ ಬಂದ ಪ್ರಕರಣಕ್ಕೆ ಸಂಬಂಧಿಸಿದಿ ಮಂಗಳವಾರ ತನಿಖೆಗೆ ಆದೇಶಿಸಲಾಗಿದೆ.
ಫೆ.16 ರಂದು ಮುಂಬೈನ ಪೊಲೀಸ್ ಠಾಣೆಗೆ ಕರೆ ಮಾಡಿರುವ ಅಪರಿಚತ ವ್ಯಕ್ತಿಯೊಬ್ಬ ನಟ ಸಲ್ಮಾನ್ ಖಾನ್ ಅವರನ್ನು ಹತ್ಯೆ ಮಾಡುವುದಾಗಿ ಬೆದರಿಕೆ ಹಾಕಿದ್ದ. ಇದೊಂದು ಸುಳ್ಳು ಬೆದರಿಕೆ ಕರೆಯಾಗಿದ್ದು, ಪ್ರಕರಣ ಸಂಬಂಧ ತನಿಖೆಗೆ ಆದೇಶಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಬೆದರಿಕೆ ಕರೆ ಮಾಡಿದ್ದ ವ್ಯಕ್ತಿ ಸ್ಥಳವನ್ನು ಈಗಾಗಲೇ ಕಂಡುಹಿಡಿದಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಅಲ್ಲದೆ, ನಟನಿಗೆ ಮತ್ತಷ್ಟು ಭದ್ರತೆ ನೀಡಲು ನಿರ್ಧರಿಸಿದ್ದಾರೆಂದು ಹೇಳಲಾಗುತ್ತಿದೆ.