ಮುಂಬೈ

ಮುಂಬೈನಲ್ಲಿ ಕಟ್ಟಡ ಕುಸಿದು 2 ಸಾವು, ಅವಶೇಷಗಳಡಿ ಹಲವರು ಸಿಲುಕಿರುವ ಸಾಧ್ಯತೆ

Pinterest LinkedIn Tumblr

Building-30ಮುಂಬೈ: ಮುಂಬೈನಲ್ಲಿ ಮೂರು ಅಂತಸ್ಥಿನ ಕಟ್ಟಡವೊಂದು ಶನಿವಾರ ಕುಸಿದುಬಿದ್ದ ಪರಿಣಾಮ ಇಬ್ಬರು ಮೃತಪಟ್ಟಿದ್ದಾರೆ ಮತ್ತು ಹಲವರು ಅವಶೇಷಗಳಡಿ ಸಿಲುಕಿರುವ ಸಾಧ್ಯತೆ ಇದೆ ಎಂದು ನಗರ ಪಾಲಿಕೆ ಅಧಿಕಾರಿಗಳು ತಿಳಿಸಿದ್ದಾರೆ.
ಮುಂಬೈನ ಕಾಮಾಟಿಪುರದ ಗ್ರ್ಯಾಂಟ್ ರಸ್ತೆಯಲ್ಲಿ ಇಂದು ಮಧ್ಯಾಹ್ನ 2 ಗಂಟೆಯ ಸುಮಾರಿಗೆ ಈ ದುರ್ಘಟನೆ ಸಂಭವಿಸಿದ್ದು, ಘಟನೆಯಲ್ಲಿ ಆರು ಮಂದಿ ತೀವ್ರವಾಗಿ ಗಾಯಗೊಂಡಿದ್ದು, ಐವರನ್ನು ರಕ್ಷಿಸಲಾಗಿದೆ ಎಂದು ಅಗ್ನಿ ಶಾಮಕ ಸಿಬ್ಬಂದಿ ಹೇಳಿದ್ದಾರೆ.
ಗಾಯಗೊಂಡವರನ್ನು ಸಮೀಪದ ಜೆಜೆ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಓರ್ವನ ಸ್ಥಿತಿ ಗಂಭೀರವಾಗಿದೆ ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲದೆ ಅವಶೇಷಗಳಡಿ ಹಲವರು ಸಿಲುಕಿರುವ ಸಾಧ್ಯತೆ ಇದೆ ಎಂದಿದ್ದಾರೆ.
ಸ್ಥಳಕ್ಕೆ ಅಗ್ಮಿ ಶಾಮಕ ಸಿಬ್ಬಂದಿ ಧಾವಿಸಿದ್ದು, ರಕ್ಷಣಾ ಕಾರ್ಯ ನಡೆಯುತ್ತಿದೆ.

Write A Comment