ಮುಂಬೈ

ಬಿಸಿಸಿಐ ಅಧ್ಯಕ್ಷರಾಗಿ ಅನುರಾಗ್‌ ಠಾಕೂರ್‌ ಆಯ್ಕೆ

Pinterest LinkedIn Tumblr

pvec22xthakurಮುಂಬೈ (ಪಿಟಿಐ): ಇಲ್ಲಿ ನಡೆದ ಬಿಸಿಸಿಐನ ವಿಶೇಷ ಮಹಾಸಭೆಯಲ್ಲಿ ಅನುರಾಗ್‌ ಠಾಕೂರ್‌ ಅವರನ್ನು ನೂತನ ಅಧ್ಯಕ್ಷರನ್ನಾಗಿ ಅವಿರೋಧವಾಗಿ ಆಯ್ಕೆ ಮಾಡಲಾಯಿತು.
ಈ ಮೊದಲು ಅಧ್ಯಕ್ಷ ಹುದ್ದೆಯಲ್ಲಿದ್ದ ಶಶಾಂಕ್‌ ಮನೋಹರ್‌ ಅವರು ಅಂತರರಾಷ್ಟ್ರೀಯ ಕ್ರಿಕೆಟ್‌ ಕೌನ್ಸಿಲ್‌ನ ಮುಖ್ಯಸ್ಥರಾಗಿ ಆಯ್ಕೆಯಾಗಿದ್ದರು. ಹೀಗಾಗಿ ಅವರು ಬಿಸಿಸಿಐ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ತೆರವಾಗಿದ್ದ ಈ ಹುದ್ದೆಗೆ ಠಾಕೂರ್‌ ಅವರನ್ನು ನೇಮಕ ಮಾಡಲಾಗಿದೆ.
‘ಬಿಸಿಸಿಐನ ಉನ್ನತ ಹುದ್ದೆ ದೊರೆತಿರುವುದು ನನಗೆ ಸಂತೋಷವಾಗಿದೆ. ಸಿಕ್ಕಿರುವ ಈ ಜವಾಬ್ದಾರಿ ಹುದ್ದೆಯನ್ನು ಸಮರ್ಥವಾಗಿ ನಿಭಾಯಿಸುತ್ತೇನೆ’ ಅನುರಾಗ್‌ ಠಾಕೂರ್‌ ಪ್ರತಿಕ್ರಿಯಿಸಿದ್ದಾರೆ.
ಠಾಕೂರ್‌ ಅವರು ಶನಿವಾರ ಬಿಸಿಸಿಐ ಕಾರ್ಯದರ್ಶಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಅಧ್ಯಕ್ಷ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿದ್ದಾರೆ. ಅನುರಾಗ್‌ ಅವರನ್ನು ಅಧ್ಯಕ್ಷರನ್ನಾಗಿ ನೇಮಕ ಮಾಡಲು ಪೂರ್ವ ವಲಯದ ಬಂಗಾಳ, ಅಸ್ಸಾಂ, ತ್ರಿಪುರ, ರಾಷ್ಟ್ರೀಯ ಕ್ರಿಕೆಟ್‌ ಕ್ಲಬ್‌ ಮತ್ತು ಜಾರ್ಖಂಡ್‌ ಕ್ರಿಕೆಟ್‌ ಸಂಸ್ಥೆಗಳು ಒಪ್ಪಿಗೆ ಸೂಚಿಸಿದ್ದು, ಅವರ ನಾಮಪತ್ರಕ್ಕೆ ಸಹಿ ಹಾಕಿದ್ದವು.
ಯಾವ ವಿರೋಧವು ಇಲ್ಲದೆ 41 ವರ್ಷ ವಯಸ್ಸಿನ ಠಾಕೂರ್‌ ಅವರನ್ನು ಆಯ್ಕೆ ಮಾಡಲಾಗಿದೆ. ಬಿಜೆಪಿ ಸಂಸದರೂ ಆಗಿರುವ ಅನುರಾಗ್‌ ಅವರಿಗೆ ಬಂಗಾಳ ಕ್ರಿಕೆಟ್‌ ಸಂಸ್ಥೆಯ ಅಧ್ಯಕ್ಷ ಸೌರವ್‌ ಗಂಗೂಲಿ, ಬಿಸಿಸಿಐ ಅಧಿಕಾರಿ ರತ್ನಾಕರ ಶೆಟ್ಟಿ ಮತ್ತು ಅಜಯ್‌ ಶಿರ್ಕೆ ಅಭಿನಂದನೆ ಸಲ್ಲಿಸಿದ್ದಾರೆ.

Comments are closed.