ಮುಂಬೈ

ಮಹಾರಾಷ್ಟ್ರ ಕಂದಾಯ ಸಚಿವ ಏಕನಾಥ್ ಖಾಡ್ಸೆ ರಾಜೀನಾಮೆ

Pinterest LinkedIn Tumblr

khadse

ಮುಂಬೈ: ಹಗರಣದ ಸುಳಿಯಲ್ಲಿ ಸಿಕ್ಕಿದ್ದ ಮಹಾರಾಷ್ಟ್ರ ಕಂದಾಯ ಸಚಿವ ಏಕನಾಥ್ ಖಾಡ್ಸೆ, ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಅವರಿಗೆ ರಾಜೀನಾಮೆ ಸಲ್ಲಿಸಿದ್ದಾರೆ.

ಇತ್ತೀಚೆಗಷ್ಟೇ, ಖಾಡ್ಸೆ ಅವರ ಅಕ್ರಮ ಭೂ ವ್ಯವಹಾರ ಹಾಗೂ ಭೂಗತ ಪಾತಕಿ ದಾವೂದ್ ಇಬ್ರಾಹಿಂನೊಂದಿಗೆ ಸಂಪರ್ಕ ಹೊಂದಿದ ಆರೋಪಕ್ಕೆ ಸಂಬಂಧಿಸಿದಂತೆ ಬಿಜೆಪಿ ಅಧ್ಯಕ್ಷ ಅಮಿತ್ ಶಾ ಅವರು ಮಹಾ ಬಿಜೆಪಿಯಿಂದ ವರದಿ ಕೇಳಿದ್ದರು.

ಅಲ್ಲದೆ, ಭೂಗತ ಪಾತಕಿ ದಾವೂದ್ ಇಬ್ರಾಹಿಂನೊಂದಿಗೆ ಸಂಪರ್ಕ ಹೊಂದಿರುವ ಮಹಾರಾಷ್ಟ್ರದ ಕಂದಾಯ ಸಚಿವ ಏಕನಾಥ್ ಖಾಡ್ಸೆ ಅವರನ್ನು ಕೂಡಲೇ ಬಂಧಿಸದಿದ್ದರೆ, ಉಪವಾಸ ಸತ್ಯಾಗ್ರಹ ಕೈಗೊಳ್ಳುವೆ ಎಂದು ಆಮ್ ಆದ್ಮಿ ಪಕ್ಷದ ಮಾಜಿ ಸದಸ್ಯೆ ಅಂಜಲಿ ದಮಾನಿಯಾ ಕೂಡ ಎಚ್ಚರಿಸಿದ್ದರು.

ಆದುದರಿಂದ ಖಾಡ್ಸೆ ಜೊತೆಗೆ ಮಾತುಕತೆ ನಡೆಸಿದ್ದ ಮುಖ್ಯಮಂತ್ರಿ, ರಾಜೀನಾಮೆಯೇ ಸೂಕ್ತ ಎಂದು ಮನವೊಲಿಸಿದ್ದರು ಎಂದು ತಿಳಿದುಬಂದಿದೆ.

Comments are closed.