ಮುಂಬೈ

ಬಿಜೆಪಿ ಜತೆ ಮೈತ್ರಿ ಮುರಿದುಕೊಂಡ ಶಿವಸೇನೆ

Pinterest LinkedIn Tumblr


ಮುಂಬೈ: ಮಹತ್ವದ ಬೆಳವಣಿಗೆಯೊಂದರಲ್ಲಿ ಗೋವಾದಲ್ಲಿ ಶಿವಸೇನೆ ಪಕ್ಷವು ಬಿಜಪಿ ಜತೆಗಿನ ಮೈತ್ರಿ ಮುರಿದುಕೊಂಡಿದ್ದು, ಪ್ರಮುಖ ಪ್ರಾದೇಶಿಕ ಪಕ್ಷಗಳಾದ ಎಂಜಿಪಿ ಮತ್ತು ಜಿಎಸ್‌ಎಂ ಜತೆ ಕೈಜೋಡಿಸಿದೆ. ಇದರಿಂದ ಬಿಜೆಪಿಗೆ ಹಿನ್ನಡೆಯಾದಂತಾಗಿದೆ.

ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಶಿವಸೇನೆಯು ಸ್ಥಳೀಯ ಪ್ರಾದೇಶಿಕ ಪಕ್ಷಗಳ ಜತೆ ಮೈತ್ರಿ ಮಾಡಿಕೊಳ್ಳುವ ಮೂಲಕ ಬಿಜೆಪಿಗೆ ಶಾಕ್‌ ನೀಡಿದೆ.

ಈಗಾಗಲೇ ಬಿಜೆಪಿ ಮೈತ್ರಿಯಿಂದ ಹೊರಬಂದಿರುವ ಮಹಾರಾಷ್ಟ್ರವಾದಿ ಗೋಮಂತಕ ಪಕ್ಷ (ಎಂ.ಜಿ.ಪಿ) ಹಾಗೂ ಗೋವಾ ಸುರಕ್ಷಾ ಮಂಚ್‌ ಪಕ್ಷಗಳ ಜೊತೆ ಮೈತ್ರಿ ಮಾಡಿಕೊಂಡು ಬಿಜೆಪಿ ವಿರುದ್ಧ ಸ್ಪರ್ಧಿಸಲು ಶಿವಸೇನೆ ಅಣಿಯಾಗಿದೆ ಎಂದು ಪಕ್ಷದ ಉನ್ನತ ಮೂಲಗಳು ತಿಳಿಸಿವೆ.

Comments are closed.