ಮುಂಬೈ

ಮಹಿಳೆಯರ ನಿಂದನೆ: ಮಹಾ ಆಯೋಗ ವರದಿ ಸಲ್ಲಿಸಲು ನಿರ್ಧಾರ

Pinterest LinkedIn Tumblr


ಮುಂಬೈ: ಇತ್ತೀಚಿಗೆ ಮಹಿಳೆಯರ ಮೇಲೆ ನಡೆಯುತ್ತಿರುವ ದೌರ್ಜನ್ಯಗಳು ಹಾಗೂ ಸಾಮಾಜಿಕ ಜಾಲತಾಣದಲ್ಲಿ ಮಹಿಳೆಯರ ಮೇಲೆ ಅವಾಚ್ಯ ಶಬ್ಧಗಳಿಂದ ನಿಂದನೆಗಳು, ಕೀಳು ಮಟ್ಟದ ಪ್ರತಿಕ್ರಿಯೆ ನೀಡುವವರ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಕಠಿಣ ಕ್ರಮಗಳನ್ನು ಕೈಗೊಳ್ಳುವ ಕುರಿತು ಮಹಿಳಾ ಹಕ್ಕುಗಳ ಆಯೋಗ ರಾಜ್ಯ ಸರಕಾರಕ್ಕೆ ವರದಿ ಸಲ್ಲಿಸಲು ನಿರ್ಧರಿಸಿದೆ.

ಮಹಿಳಾ ಹಕ್ಕು ಆಯೋಗ ಅಧ್ಯಕ್ಷೆ ವಿಜಯ ರಾಹತ್ಕರ್‌ ಈ ವಿಷಯವನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವ ಪಂಕಜಾ ಮುಂಡೆ ಅವರನ್ನು ಭೇಟಿ ಮಾಡಿ ಸಮಾಲೋಚನೆ ನಡೆಸಿದರು.

ಸಾಮಾಜಿಕ ಜಾಲತಾಣಗಳಲ್ಲಿ ಮಹಿಳೆಯರನ್ನು ಇತ್ತೀಚೆಗೆ ಅಸಭ್ಯವಾಗಿ ನಿಂದಿಸಲಾಗುತ್ತಿದೆ. ಇಂಥ ಪ್ರಕರಣಗಳು ಹೆಚ್ಚಾಗುತ್ತಿವೆ. ಈ ಹಿನ್ನೆಲೆಯಲ್ಲಿ ಸ್ವಯಂ ಪ್ರೇರಿತವಾಗಿ ಅಧ್ಯಯನ ನಡೆಸಿ ವರದಿ ಸಲ್ಲಿಸಲಾಗುವುದು ಎಂದು ವಿಜಯ ರಾಹತ್ಕರ್‌ ತಿಳಿಸಿದ್ದಾರೆ.

ಕೌಟುಂಬಿಕ ದೌರ್ಜನ್ಯ ಪ್ರಕರಣಗಳು, ಕಿರುಕುಳ ಪ್ರಕರಣಗಳು ಹೆಚ್ಚಾಗುತ್ತಿದೆ. ರಾಜಕೀಯ ಪಕ್ಷಗಳಿಗೆ ದುಡಿಯುತ್ತಿರುವ ಕಾರ್ಯಕರ್ತೆಯರ ಮೇಲೂ ಇಂಥ ಕಿರುಕುಳಗಳು ಆಗಿರುವ ಪ್ರಕರಣಗಳಿವೆ. ಈ ಎಲ್ಲ ದೃಷ್ಟಿಯಿಂದಲೂ ರಾಜ್ಯ ಸರಕಾರಕ್ಕೆ ವರದಿ ಸಲ್ಲಿಸಲಿದ್ದೇವೆ ಎಂದು ಅಹೇಳಿದರು.

ಅತಿ ಶೀಘ್ರದಲ್ಲಿಯೇ ರಾಜ್ಯ ಸರಕಾರ ವರದಿ ಸಲ್ಲಿಸುತ್ತೇವೆ ಎಂದು ವಿಜಯ ರಾಹತ್ಕರ್‌ ತಿಳಿಸಿದ್ದಾರೆ.

Comments are closed.