ಮುಂಬೈ

ಮುಂಬಯಿಯಲ್ಲಿ ಭಾರೀ ಮಳೆಗೆ ಜನ ಜೀವನ ತತ್ತರ ; ಹಲವು ಪ್ರದೇಶಗಳಲ್ಲಿ ಪ್ರವಾಹ ಪರಿಸ್ಥಿತಿ

Pinterest LinkedIn Tumblr

ಮುಂಬಯಿ: ಇಂದು ಕೂಡ ಮುಂಬಯಿಯಲ್ಲಿ ಧಾರಾಕಾರ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.

ಶುಕ್ರವಾರ ರಾತ್ರಿ ಸುರಿದ ಭಾರಿ ಮಳೆಯಿಂದಾಗಿ ಮಹಿಮ್, ವೊರ್ಲಿ,ಹಿಂದ್ಮಟಾ ನಗರದ ಹಲವು ಪ್ರದೇಶಗಳಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗಿದೆ.

ಶನಿವಾರ ಮತ್ತು ಭಾನುವಾರ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದೆ. ಸಾರ್ವಜನಿಕರು ಎಚ್ಚರಿಕೆ ವಹಿಸಬೇಕೆಂದು ಹವಾಮಾನ ಇಲಾಖೆ ಸೂಚಿಸಿದೆ.

ಸ್ಥಳೀಯ ರೈಲುಗಳ ಸಂಚಾರ ವೇಳೆಯಲ್ಲೂ ವಿಳಂಭವಾಗಿದೆ, ಸುಮಾರು 10ರಿಂದ 12 ನಿಮಿಷ ತಡವಾಗಿ ರೈಲುಗಳು ಆಗಮಿಸುತ್ತಿವೆ, ಸುಮಾರು 32 ವಿಮಾನಗಳ ಹಾರಾಟ ರದ್ಧಾಗಿದೆ ಎಂದು ತಿಳಿದು ಬಂದಿದೆ.

ಜೂನ್‌ 9ರಿಂದ 11ರ ವರೆಗೆ ನಗರದಲ್ಲಿ ಭಾರಿ ಮಳೆಯಾಗುವ ನಿರೀಕ್ಷೆಯಿದ್ದು, ಭಾರೀ ಪ್ರಮಾಣದ ನೀರಿನಿಂದಾಗಿ ವಾರಾಂತ್ಯದಲ್ಲಿ ಜನಜೀವನ ಅಸ್ತವ್ಯಸ್ಥಗೊಳ್ಳುವ ಸಾಧ್ಯತೆಯಿದೆ.ಹೀಗಾಗಿ ಮೀನುಗಾರರು ಸಮುದ್ರಕ್ಕೆ ತೆರಳದಂತೆ ಸೂಚಿಸಲಾಗಿದೆ.

Comments are closed.