ಮುಂಬೈ

ಕಾಂಗ್ರೆಸ್ ನಾಯಕಿ ಪ್ರಿಯಾಂಕ ಮಗಳಿಗೆ ಅತ್ಯಾಚಾರ ಬೆದರಿಕೆ: ದೂರು ದಾಖಲು

Pinterest LinkedIn Tumblr


ಮುಂಬಯಿ: ತಮ್ಮ 10 ವರ್ಷದ ಮಗಳ ಮೇಲೆ ಅತ್ಯಾಚಾರ ನಡೆಸುವುದಾಗಿ ಟ್ವಿರ್ಟ್ಟ ನಲ್ಲಿ ವ್ಯಕ್ತಿಯೊಬ್ಬನಿಂದ ಬೆದರಿಕೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಚತುರ್ವೇದಿ ಕ್ರಿಮಿನಲ್ ಕೇಸ್ ದಾಖಲಿಸಿದ್ದಾರೆ.

ಪ್ರತಿದಿನ ನಮ್ಮನ್ನು ಟ್ರೋಲ್ ಮಾಡಲಾಗುತ್ತದೆ, ಆದರೆ ನನ್ನ ಮಗಳನ್ನು ಸಾಮಾಜಿಕ ಮಾಧ್ಯಮಕ್ಕೆ ಅನಗತ್ಯವಾಗಿ ಎಳೆದು ತರಲಾಗುತ್ತಿದೆ, ಹೀಗಾಗಿ ನಾನು ದೂರು ದಾಖಲಿಸಿದ್ದೇನೆ ಎಂದು ಪ್ರಿಯಾಂಕಾ ಹೇಳಿದ್ದಾರೆ.

ಟ್ವಿರ್ಟ್ಟ ನಲ್ಲಿ ಬೆದರಿಕೆ ಬಂದ ಹಿನ್ನೆಲೆಯಲ್ಲಿ ಈ ಸಂಬಂಧ ಮುಂಬಯಿ ಪೊಲೀಸರಿಗೆ ದೂರು ನೀಡಿದ್ದಾಗಿ ಹೇಳಿದ್ದಾರೆ,ಈ ಸಂಬಂಧ ಕ್ರಮ ಕೈಗೊಳ್ಳುವುದಾಗಿ ಪೊಲೀಸರು ಭರವಸೆ ನೀಡಿದ್ದಾರೆ.

GirishK1605 ಎಂಬ ಟ್ವೀಟಿಗ ಚತುರ್ವೇದಿ ಮಗಳಿಗೆ ಕೆಟ್ಟದ್ದು ಮಾಡುವುದಾಗಿ ಬೆದರಿಕೆ ಹಾಕಿದ್ದಾನೆ ಎಂದು ಪ್ರಿಯಾಂಕಾ ತಿಳಿಸಿದ್ದಾರೆ, ಆದರೆ ಟ್ವೀಟ್ ನಲ್ಲಿ ಆ ಹೆಸರಿನ ವ್ಯಕ್ತಿ ಇಲ್ಲ ಎಂದು ತಿಳಿದು ಬಂದಿದೆ.

ಸಾಮಾಜಿಕ ಮಾಧ್ಯಮದಲ್ಲಿ ಈ ಬಗ್ಗೆ ಚರ್ಚೆಯಾಗುತ್ತಿದ್ದು, ನೆಟ್ಟಿಜನ್ ಹಾಗೂ ಹಲವು ರಾಜಕೀಯ ಮುಖಂಡರು ಪ್ರಿಯಾಂಕಾ ಅವರಿಗೆ ಬೆಂಬಲ ಸೂಚಿಸಿದ್ದಾರೆ.

Comments are closed.