ಮುಂಬೈ

ಟೇಕಾಫ್’ಗೆ ಸಿದ್ಧವಾಗಿದ್ದ ವಿಮಾನದಿಂದ ಕೆಳಗೆ ಬಿದ್ದು ಗಂಭೀರವಾಗಿ ಗಾಯಗೊಂಡ ಗಗನಸಖಿ !

Pinterest LinkedIn Tumblr

ಮುಂಬೈ: ಟೇಕಾಫ್ ಗೆ ಸಿದ್ದವಾಗಿದ್ದ ವಿಮಾನದಿಂದ ಗಗನಸಖಿಯೊಬ್ಬರು ಕೆಳಗೆ ಬಿದ್ದು ಗಂಭೀರವಾಗಿ ಗಾಯಗೊಂಡಿರುವ ಘಟನೆ ಮುಂಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸೋಮವಾರ ನಡೆದಿದೆ.

ಮುಂಬೈನ ಛತ್ರಪತಿ ಶಿವಾಜಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ದೆಹಲಿಗೆ ಹಾರಲು ಸಿದ್ಧವಾಗಿದ್ದ ಏರ್ ಇಂಡಿಯಾ ವಿಮಾನ ಎಐ 864ದಲ್ಲಿ ಈ ಘಟನೆ ನಡೆದಿದ್ದು, ವಿಮಾನ ಚಾಲನೆಯಾಗುತ್ತಿದ್ದಂತೆಯೇ ವಿಮಾನದಲ್ಲಿದ್ದ ಸುಮಾರು 53 ವರ್ಷದ ಗಗನಸಖಿಯೊಬ್ಬರು ವಿಮಾನದ ಬಾಗಿಲು ಮುಚ್ಚಲು ಪ್ರಯತ್ನಿಸಿದ್ದಾರೆ. ಈ ವೇಳೆ ಅವರು ಆಯತಪ್ಪಿ ಕೆಳಗೆ ಬಿದ್ದಿದ್ದು, ಅವರಿಗೆ ಗಂಭೀರ ಗಾಯಗಳಾಗಿವೆ ಎಂದು ತಿಳಿದುಬಂದಿದೆ.

ವಿಮಾನದ ಪುಷ್‌ ಬ್ಯಾಕ್‌ ಬಾಗಿಲು ಮುಚ್ಚುವ ಸಂದರ್ಭದಲ್ಲಿ ಈ ಘಟನೆ ನಡೆದಿರುವುದಾಗಿ ವರದಿಯಾಗಿದ್ದು, ತೀವ್ರ ಗಾಯಗೊಂಡಿರುವ ಅವರನ್ನು ಮುಂಬೈನ ನಾನಾವತಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಈ ವರೆಗೂ ಏರ್ ಇಂಡಿಯಾ ಯಾವುದೇ ರೀತಿಯ ಪ್ರತಿಕ್ರಿಯೆ ನೀಡಿಲ್ಲ.

Comments are closed.