ಮುಂಬೈ

ಸೆಕ್ಸ್’ಗಾಗಿ ಮಹಿಳೆಯಿಂದ ಒತ್ತಾಯ, ಒಪ್ಪದಿದ್ದಕ್ಕೆ ಬೆದರಿಕೆ; ನೊಂದ ವ್ಯಕ್ತಿಯೋರ್ವ ಆತ್ಮಹತ್ಯೆ

Pinterest LinkedIn Tumblr

ಮುಂಬೈ: ವಿವಾಹಿತ ಮಹಿಳೆಯೊಬ್ಬರು ಸತತವಾಗಿ ಸೆಕ್ಸ್ ಗೆ ಒತ್ತಾಯಿಸುತ್ತಿದ್ದಾರೆ ಎಂದು ನೊಂದ ವ್ಯಕ್ತಿಯೋರ್ವ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ.

ಮಹಾರಾಷ್ಟ್ರದ ಪರ್ಭಾನಿ ಜಿಲ್ಲೆಯಲ್ಲಿ ಈ ಘಟನೆ ನಡೆದಿದ್ದು, ಸಚಿನ್ ಮಿಟ್ಕಾರಿ ಎಂಬ 38 ವರ್ಷದ ವ್ಯಕ್ತಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ. ಸಚಿನ ಸಾವಿಗೂ ಮುನ್ನ ಡೆತ್ ನೋಟ್ ಬರೆದಿದ್ದು, ಅದರಲ್ಲಿ ತನ್ನೊಂದಿಗೆ ಅಕ್ರಮ ಸಂಬಂಧ ಹೊಂದಲು ಪೀಡಿಸುತ್ತಿದ್ದ ಮಹಿಳೆಯೇ ತನ್ನ ಸಾವಿಗೆ ಕಾರಣ ಎಂದು ಬರೆದಿದ್ದಾನೆ. ಮಹಿಳೆಯು ತನ್ನನ್ನು ನಿರಂತರವಾಗಿ ಸೆಕ್ಸ್ ಗೆ ಒತ್ತಾಯಿಸುತ್ತಿದ್ದಳು. ಒಪ್ಪದಿದ್ದರೆ ನನ್ನ ವಿರುದ್ದ ಕ್ರಿಮಿನಲ್ ಮೊಕದ್ದಮೆ ಹೂಡುವುದಾಗಿ ಬೆದರಿಕೆ ಹಾಕುತ್ತಿದ್ದಳು. ಅವಳ ಪೀಡನೆಯಿಂದ ಬೇಸತ್ತು ತಾನು ಆತ್ಮಹತ್ಯೆಗೆ ಶರಣಾಗುತ್ತಿರುವುದಾಗಿ ಬರೆದಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಇನ್ನು ಸಚಿನ್ ಮತ್ತು ಆರೋಪಿ ಮಹಿಳೆ ಇಬ್ಬರೂ ಸ್ಥಳೀಯ ಆಸ್ಪತ್ರೆಯೊಂದರಲ್ಲಿ ಕೆಲಸ ಮಾಡುತ್ತಿದ್ದರು. ಪ್ರಸ್ತುತ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Comments are closed.