ಮುಂಬೈ

ಮುಂಬೈನಲ್ಲಿ ಭಾರೀ ಮಳೆಗೆ ಗೋಡೆ ಕುಸಿತ; ಸಾವಿನ ಸಂಖ್ಯೆ 18 ಕ್ಕೆ ಏರಿಕೆ: ಸಾರ್ವತ್ರಿಕ ರಜೆ ಘೋಷಣೆ

Pinterest LinkedIn Tumblr

ಮುಂಬೈ: ಮುಂಬೈನಲ್ಲಿ ಮಂಗಳವಾರ ಭಾರಿ ಮಳೆಯ ಹಿನ್ನೆಲೆಯಲ್ಲಿ ಗೋಡೆ ಕುಸಿದ ಘಟನೆಯಲ್ಲಿ ಕನಿಷ್ಠ 16 ಜನರು ಸಾವನ್ನಪ್ಪಿದ್ದಾರೆ ಮತ್ತು 80 ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ, ರಸ್ತೆಗಳು ಮತ್ತು ರೈಲು ಹಳಿಗಳಲ್ಲಿ ನೀರು ಹರಿಯುವುದರಿಂದಾಗಿ ರಸ್ತೆ, ರೈಲು ಸಂಚಾರಕ್ಕೆ ಅಡ್ಡಿಯಾಗಿದೆ. ಈ ಹಿನ್ನೆಲೆ ಇಂದು ಸಾರ್ವಜನಿಕ ರಜಾ ಘೋಷಣೆಯಾಗಿದೆ.

ಮುಂಜಾನೆ 2 ಗಂಟೆ ಸುಮಾರಿಗೆ ಮಲಾಡ್ ಪೂರ್ವದ ಪಿಂಪ್ರಿಪಾಡಾ ದೇಶದಲ್ಲಿ ಕಾಂಪೌಂಡ್ ಗೋಡೆ ಕುಸಿದಿದ್ದು, ಗೋಡೆಯ ಪಕ್ಕದ ಗುಡಿಸಲುಗಳಲ್ಲಿ ವಾಸಿಸುವ ಜನರು ಭಗ್ನಾವಶೇಷದಲ್ಲಿ ಸಿಲುಕಿಕೊಂಡಿದ್ದಾರೆ ಎಂದು ಎನ್‌ಡಿಆರ್‌ಎಫ್ ಅಧಿಕಾರಿಗಳು ತಿಳಿಸಿದ್ದಾರೆ.ಗೋಡೆ ಕುಸಿದ ಘಟನೆಯಲ್ಲಿ 16 ಜನರು ಸಾವನ್ನಪ್ಪಿದ್ದಾರೆ.

ಅಗ್ನಿಶಾಮಕ ದಳ ಮತ್ತು ಸ್ಥಳೀಯ ಪೊಲೀಸರ ತಂಡವೂ ಸ್ಥಳಕ್ಕೆ ತಲುಪಿ ಪರಿಸ್ಥಿತಿಯನ್ನು ನಿಯಂತ್ರಿಸಿದೆ ಎಂದು ಎನ್‌ಡಿಆರ್‌ಎಫ್ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.ಗೋಡೆ ಕುಸಿದು 34 ಜನರನ್ನು ಜೋಗೇಶ್ವರಿ ತುರ್ತು ಚಿಕಿತ್ಸಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಕುರಾರ್ ಗ್ರಾಮದಲ್ಲಿ ಗೋಡೆ ಕುಸಿದು ಇನ್ನೂ 51 ಮಂದಿ ಗಾಯಗೊಂಡಿದ್ದು, ಅವರನ್ನು ಕಂಡಿವಲಿ ಮೂಲದ ಶತಾಬ್ದಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.
ಭಾರತದ ಹವಾಮಾನ ಇಲಾಖೆ ಭಾರೀ ಮಳೆಯಾಗುವ ಮುನ್ಸೂಚನೆ ನೀಡಿರುವುದರಿಂದ ಅಧಿಕಾರಿಗಳು ಮಂಗಳವಾರ ಮುಂಬಯಿಯಲ್ಲಿ ಸಾರ್ವಜನಿಕ ರಜಾದಿನವೆಂದು ಘೋಷಿಸಿದ್ದಾರೆ.

ಇನ್ನು ರೈಲ್ವೆ ಹಳಿಗಳಲ್ಲಿ ನೀರು ಪ್ರವೇಶಿಸುವುದರಿಂದ ಸ್ಥಳೀಯ ರೈಲುಗಳನ್ನು ಸೀಮಿತ ಸ್ಥಳಗಳಲ್ಲಿ ಮಾತ್ರ ಓಡಿಸಲು ತೀರ್ಮಾನಿಸಲಾಗಿದೆ. ಮಧ್ಯ ಮತ್ತು ಪಶ್ಚಿಮ ರೈಲ್ವೆಗಳಲ್ಲಿ 20 ಕ್ಕೂ ಹೆಚ್ಚು ದೂರದ ರೈಲುಗಳನ್ನು ಭಾರೀ ಮಳೆಯಿಂದಾಗಿ ಮುಂಬೈ ಸಮೀಪದ ನಿಲ್ದಾಣದಲ್ಲಿ ನಿಲ್ಲಿಸಲಾಗಿದೆ. ಮುನ್ನೆಚ್ಚರಿಕೆ ಕ್ರಮವಾಗಿ ವಿದ್ಯುತ್ ಸರಬರಾಜನ್ನು ಸ್ಥಗಿತಗೊಳಿಸಲಾಗಿದೆ.

ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಗೋಡೆ ಕುಸಿತದಿಂದ ಸಾವನ್ನಪ್ಪಿರುವ ಕುಟುಂಬಗಳಿಗೆ ತಲಾ ಐದು ಲಕ್ಷ ಪರಿಹಾರ ಘೋಷಿಸಿದ್ದಾರೆ.

ಇದರ ನಡುವೆ ಪುಣೆಯಲ್ಲಿ ಸಹ ಗೋಡೆ ಕುಸಿದು ಆರು ಜನ ಕಾರ್ಮಿಕರು ಸಾವನ್ನಪ್ಪಿರುವುದಾಗಿ ವರದಿಯಾಗಿದೆ.

Comments are closed.