
ಮುಂಬೈ: ಡೋಂಗ್ರಿಯಲ್ಲಿನ ನಾಲ್ಕು ಅಂತಸ್ತಿನ ಕಟ್ಟಡ ಕುಸಿದು ಬಿದ್ದಿದ್ದು 12 ಜನರು ಮೃತಪಟ್ಟಿದ್ದು ಸುಮಾರು 40 ಕ್ಕೂ ಹೆಚ್ಚು ಜನರು ಕಟ್ಟಡದ ಅವಶೇಷಗಳ ಅಡಿಯಲ್ಲಿ ಸಿಲುಕಿದ್ದಾರೆ ಎನ್ನಲಾಗಿದೆ.
ಈ ಅವಘಡ ಇಂದು ಬೆಳಗ್ಗೆ 11.40 ಗಂಟೆಯಷ್ಟರಲ್ಲಿ ನಡೆದಿದ್ದು ಅಗ್ನಿಶಾಮಕ ದಳ ಕೂಡಲೇ ಸ್ಥಳಕ್ಕಾಗಮಿಸಿ ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದೆ. ಈ ನಾಲ್ಕು ಅಂತಸ್ತಿನ ಕೇಸರ್ಬಾಯ್ ಕಟ್ಟಡ ಕುಸಿದು ತಂದೇಲ್ ರಸ್ತೆಯ ಮೇಲೆ ಬಿದ್ದಿದ್ದಾಗಿ ಬೃಹನ್ ಮುಂಬೈ ಮುನ್ಸಿಪಲ್ ಕಾರ್ಪೊರೇಷನ (ಬಿಎಂಸಿ) ವಿಪತ್ತು ನಿರ್ವಹಣಾ ಘಟಕ ತಿಳಿಸಿದೆ.
ಸಂಪೂರ್ಣ ಕಟ್ಟಡ ನೆಲಕ್ಕಚ್ಚಿರುವ ಹಿನ್ನೆಲೆಯಲ್ಲಿ ಅವಶೇಷಗಳಡಿಯಲ್ಲಿ ಇನ್ನೂ ಅನೇಕ ಮಂದಿ ಸಿಲುಕಿರುವ ಸಾಧ್ಯತೆಗಳೂ ಇದ್ದು, ಸಾವಿನ ಸಂಖ್ಯೆ ಹೆಚ್ಚುವ ಭೀತಿ ಉಂಟಾಗಿದೆ.
ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳ ಹಾಗೂ ಎನ್ಡಿಆರ್ಎಫ್ ತಂಡಗಳು ಧಾವಿಸಿದ್ದು, ರಕ್ಷಣಾ ಕಾರ್ಯದಲ್ಲಿ ತೊಡಗಿದ್ದಾರೆ. ಡೋಂಗ್ರಿಯಲ್ಲಿರುವ ನಾಲ್ಕು ಅಂತಸ್ಥಿನ ಕೇಸರಿಬಾಯಿ ಕಟ್ಟಡ ಸಂಪೂರ್ಣವಾಗಿ ಕುಸಿದಿದೆ.
ಅಗ್ನಿಶಾಮಕ ದಳದ ಐದು ವಾಹನಗಳು ಸ್ಥಳಕ್ಕೆ ತೆರಳಿದ್ದು, 10-12 ಕುಟುಂಬಗಳು ಅವಶೇಷಗಳಡಿ ಸಿಲುಕಿದ್ದಾರೆ ಎಂದು ತಿಳಿದು ಬಂದಿದೆ. ಕಟ್ಟಡದ ಕುಸಿತದ ಸ್ಥಳಕ್ಕೆ ಮುಂಬಾದೇವಿ ಶಾಸಕ ಅಮಿನ್ ಪಟೇಲ್ ತೆರಳಿದ್ದು, ಪರಿಶೀಲನೆ ನಡೆಸಿದ್ದಾರೆ.
ಕಟ್ಟಡವು ಮುಂಬಯಿಯ ಅಪಾಯದಂಚಿನಲ್ಲಿರುವ ಕಟ್ಟಡದ ಪಟ್ಟಿಯಲ್ಲಿರಲಿಲ್ಲ ಎನ್ನಲಾಗಿದೆ. ಒಟ್ಟಾರೆ 10 ಅಂಬ್ಯುಲೆನ್ಸ್ಗಳು ಸ್ಥಳಕ್ಕೆ ಆಗಮಿಸಿದ್ದು, ಅಗತ್ಯ ವೈದ್ಯಕೀಯ ನೆರವು ನೀಡುತ್ತಿದ್ದಾರೆ. ತಾತ್ಕಾಲಿಕ ಶೆಡ್ ನಿರ್ಮಿಸಲಾಗಿದ್ದು, ಗಾಯಾಳುಗಳ ಚಿಕಿತ್ಸೆಗೆ ಅಗತ್ಯ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿದು ಬಂದಿದೆ. ಈ ವರೆಗೆ ಐವರನ್ನು ಸುರಕ್ಷಿತವಾಗಿ ಅವಶೇಷಗಳಡಿಯಿಂದ ರಕ್ಷಿಸಲಾಗಿದ್ದು, ಇಬ್ಬರು ಮೃತಪಟ್ಟಿರುವ ಬಗ್ಗೆ ಮಾಹಿತಿ ಸಿಕ್ಕಿದೆ.
Comments are closed.