ಮುಂಬೈ: ಪ್ರಮುಖ ಬೆಳವಣಿಗೆಯಲ್ಲಿ ಮುಂಬೈ ಪೊಲೀಸರು ಕುಖ್ಯಾತ ಭೂಗತ ಪಾತಕಿ ದಾವೂದ್ ಇಬ್ರಾಹಿಂ ಸಹೋದರನ ಪುತ್ರನನ್ನು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ.
ಮೂಲಗಳ ಪ್ರಕಾರ ಸುಲಿಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂಬೈ ಪೊಲೀಸರು ಇಂದು ಭೂಗತ ಪಾತಕಿ ದಾವೂದ್ ಇಬ್ರಾಹಿಂ ಸಹೋದನ ಪುತ್ರ ರಿಜ್ವಾನ್ ಕಸ್ಕರ್ ನನ್ನು ಬಂಧಿಸಿದ್ದಾರೆ.
ಮೂಲಗಳ ಪ್ರಕಾರ ಮುಂಬೈ ಪೊಲೀಸರ ಕ್ರೈಂ ಬ್ರ್ಯಾಂಚ್ ನ ಅಧಿಕಾರಿಗಳು ಮುಂಬೈ ವಿಮಾನ ನಿಲ್ದಾಣದಲ್ಲಿ ಬಂಧಿಸಿದ್ದಾರೆ. ಆತ ದೇಶ ಬಿಟ್ಟು ದುಬೈ ತೆರಳುವ ಹುನ್ನಾರ ನಡೆಸಿದ್ದ ಎಂದು ತಿಳಿದುಬಂದಿದೆ.
ಆರೋಪಿ ರಿಜ್ವಾನ್ ಕಸ್ಕರ್ ಜನರನ್ನು ಹೆದರಿಸಿ ಅವರಿಂದ ಹಣ ಸುಲಿಗೆ ಮಾಡುತ್ತಿದ್ದ. ಈ ಸಂಬಂಧ ಆತನ ವಿರುದ್ಧ ಹಲವು ಪ್ರಕರಣಗಳು ದಾಖಲಾಗಿದ್ದವು. ಕಸ್ಕರ್ ವಿಮಾನ ನಿಲ್ದಾಣಕ್ಕೆ ಬರುವ ಖಚಿತ ಮಾಹಿತಿ ಪಡೆದ ಅಧಿಕಾರಿಗಳು ಆತನನ್ನು ಬಂಧಿಸಿದ್ದಾರೆ.
ಈಗ್ಗೆ 2 ದಿನಗಳ ಹಿಂದಷ್ಟೇ ಮುಂಬೈ ಕ್ರೈಂ ಬ್ರಾಂಚ್ ಪೊಲೀಸರು, ದಾವೂದ್ ಭಂಟ ಅಹ್ಮದ್ ರಾಜಾ ವಧಾರಿಯಾ ಎಂಬಾತನನ್ನು ಬಂಧಿಸಿದ್ದರು. ಆತ ನೀಡಿದ ಮಾಹಿತಿ ಮೇರೆಗೆ ಪೊಲೀಸರು ಈ ಕಾರ್ಯಾಚರಣೆ ನಡೆಸಿದ್ದಾರೆ ಎನ್ನಲಾಗಿದೆ.
Comments are closed.