ಮನೋರಂಜನೆ

ರಾನು ಮೊಂಡಲ್ ಮೇಕಪ್ ಫೋಟೋ ವೈರಲ್

Pinterest LinkedIn Tumblr


ಮುಂಬೈ: ಇಂಟೆರ್‌ನೆಟ್ ಸ್ಟಾರ್ ರಾನು ಮೊಂಡಲ್ ಮೇಕಪ್ ಹಾಕಿರುವ ಫೋಟೋ ವೈರಲ್ ಆಗುತ್ತಿದ್ದು, ಇದನ್ನು ನೋಡಿದ ನೆಟ್ಟಿಗರು ಸಿಕ್ಕಾಪಟ್ಟೆ ಟ್ರೋಲ್ ಮಾಡುತ್ತಿದ್ದಾರೆ.

ಇತ್ತೀಚೆಗೆ ರಾನು ಅವರು ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ್ದರು. ಈ ವೇಳೆ ಅವರು ಡಿಸೈನರ್ ಡ್ರೆಸ್ ಧರಿಸಿ ಹೆಚ್ಚು ಮೇಕಪ್ ಮಾಡಿಕೊಂಡಿದ್ದರು. ರಾನು ಅವರ ಮೇಕಪ್ ಫೋಟೋ ವೈರಲ್ ಆಗುತ್ತಿದ್ದಂತೆ ನೆಟ್ಟಿಗರು ಟ್ರೋಲ್ ಹಾಗೂ ಮಿಮ್ಸಿ ಮಾಡಲು ಶುರು ಮಾಡಿದ್ದಾರೆ. ಕೆಲವು ಫೋಟೋದಲ್ಲಿ ರಾನು ಮೊಂಡಲ್ ಅವರು ತುಂಬಾ ಬೆಳ್ಳಗೆ ಕಾಣಿಸಿಕೊಂಡಿದ್ದಾರೆ. ಆದರೆ ಇದು ಅವರ ನಿಜವಾದ ಫೋಟೋನಾ ಅಥವಾ ಫೋಟೋಶಾಪ್ ಮಾಡಿದ ಫೋಟೋನಾ ಎಂಬುದರ ಬಗ್ಗೆ ಮಾಹಿತಿ ದೊರೆತಿಲ್ಲ.

ಈ ಮೊದಲು ರಾನು ಅವರ ವಿಡಿಯೋವೊಂದು ವೈರಲ್ ಆಗಿತ್ತು. ವಿಡಿಯೋದಲ್ಲಿ ಮಹಿಳಾ ಅಭಿಮಾನಿಯೊಬ್ಬರು ರಾನು ಅವರನ್ನು ನೋಡಿ ಅವರ ಕೈ ಹಿಡಿದು ಸೆಲ್ಫಿ ಕ್ಲಿಕ್ಕಿಸಿಕೊಳ್ಳಲು ಮುಂದಾಗಿದ್ದರು. ಅಭಿಮಾನಿಯ ವರ್ತನೆ ನೋಡಿ ರಾನು ಅವರ ಮೇಲೆ ರೇಗಾಡಿದ್ದರು. ಅಭಿಮಾನಿ ಕೈ ಹಿಡಿದು ಎಳೆಯುತ್ತಿದ್ದಂತೆ ರೊಚ್ಚಿಗೆದ್ದ ರಾನು, ನನ್ನ ಕೈಯನ್ನು ಏಕೆ ಹೀಗೆ ಹಿಡಿದು ಎಳೆದಿದ್ದೀರಿ. ಈ ರೀತಿ ಕೈ ಹಾಕುವುದು ಸರಿನಾ? ಏನಿದೆಲ್ಲಾ? ಎಂದು ಮಹಿಳೆ ಮೇಲೆ ರೇಗಾಡಿದ ವಿಡಿಯೋ ವೈರಲ್ ಆಗಿತ್ತು.

ಅದಾದ ಬಳಿಕ ರಾನು ಅವರ ಮತ್ತೊಂದು ವಿಡಿಯೋ ವೈರಲ್ ಆಗಿತ್ತು. ಈ ವಿಡಿಯೋದಲ್ಲಿ ಮಾಧ್ಯಮದವರು ರಾನು ಅವರನ್ನು ಹೊಗಳುತ್ತಾ ನಿಮಗೆ ಇಷ್ಟು ದೊಡ್ಡ ಯಶಸ್ಸು ಸಿಕ್ಕಿದೆ. ನಿಮಗೆ ಹೇಗೆ ಅನಿಸುತ್ತಿದೆ ಎಂದು ಪ್ರಶ್ನಿಸಿದ್ದರು. ಆಗ ರಾನು ಬ್ಯಾಗಿನಿಂದ ಏನೋ ತೆಗೆದುಕೊಂಡು ತಿನ್ನುತ್ತಾರೆ. ಬಳಿಕ ಅಲ್ಲಿ ಇಲ್ಲಿ ನೋಡುತ್ತಾ ಮಾಧ್ಯಮದವರಿಗೆ ನೀವು ಹೇಳಿದ್ದು ನನಗೆ ಕೇಳಿಸಲಿಲ್ಲ ಎಂದು ಪ್ರತಿಕ್ರಿಯಿಸಿದ್ದರು. ಈ ವಿಡಿಯೋ ನೋಡಿ ನೆಟ್ಟಿಗರು ರಾನು ಅವರನ್ನು ತರಾಟೆಗೆ ತೆಗೆದುಕೊಂಡಿದ್ದರು.

Comments are closed.