ಮುಂಬೈ

ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್ ನ ಮಾರುಕಟ್ಟೆ ಮೌಲ್ಯ ಏರಿಕೆ

Pinterest LinkedIn Tumblr

ಮುಖೇಶ್ ಅಂಬಾನಿ ಒಡೆತನದ ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್, ಷೇರುಪೇಟೆಯಲ್ಲಿ 10 ಲಕ್ಷ ಕೋಟಿ ರೂಪಾಯಿ ಮೌಲ್ಯ ಹೊಂದಿರುವ ಕಂಪನಿಯಾಗಿ ಹೊರಹೊಮ್ಮಿದೆ.

ಗುರುವಾರದಂದು ಮುಂಬೈ ಷೇರು ಪೇಟೆಯ ವಹಿವಾಟಿನಲ್ಲಿ ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್ ಕಂಪನಿಯ ಪ್ರತಿ ಷೇರಿನ ಬೆಲೆ ಶೇಕಡ 0.65 ರಸ್ಟು ಏರಿಕೆಯಾಗಿ 1,579.95 ರೂಪಾಯಿ ತಲುಪಿದೆ.

ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್ ನ ಮಾರುಕಟ್ಟೆ ಮೌಲ್ಯ ಏರಿಕೆಯಾಗುತ್ತಿದ್ದಂತೆ ಮುಖೇಶ್ ಅಂಬಾನಿಯವರ ಸಂಪತ್ತಿನಲ್ಲೂ ಏರಿಕೆ ಕಂಡು ಬಂದಿದ್ದು, ಒಂದೇ ದಿನ 3,800 ಕೋಟಿ ರೂಪಾಯಿಗಳಷ್ಟು ಏರಿಕೆಯಾಗಿದೆ.

ವಿಶ್ವದ ಟಾಪ್ 10 ಸಿರಿವಂತರ ಪಟ್ಟಿಯಲ್ಲಿ ಸ್ಥಾನ ಪಡೆದಿರುವ ಮುಖೇಶ್ ಅಂಬಾನಿ, ಏಷ್ಯಾದ ಅತಿ ಸಿರಿವಂತ ವ್ಯಕ್ತಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಪ್ರಸ್ತುತ ಅವರ ಆಸ್ತಿ ಮೌಲ್ಯ 4.30 ಲಕ್ಷ ಕೋಟಿ ರೂಪಾಯಿಗಳೆಂದು ಹೇಳಲಾಗಿದೆ.

Comments are closed.