
ಮುಂಬೈ: ಪೌರತ್ವ ತಿದ್ದುಪಡಿ ಕಾಯ್ದೆ ಅಲ್ಪಸಂಖ್ಯಾತರ ವಿರುದ್ಧ ಇರುವಂತಹದ್ದಲ್ಲ ಎಂದು ಮತ್ತೊಮ್ಮೆ ಸ್ಪಷ್ಟಪಡಿಸಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ, ವಿರೋಧ ಪಕ್ಷಗಳು ಶಾಸನದ ಬಗ್ಗೆ ತಪ್ಪು ಅಭಿಯಾನದಲ್ಲಿ ತೊಡಗಿವೆ ಎಂದು ಆರೋಪಿಸಿದರು.
ಮಾಧ್ಯಮ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ ಅಮಿತ್ ಶಾ, ಕಳೆದ ವಾರ ಸಂಸತ್ನಲ್ಲಿ ಅಂಗೀಕಾರ ಪಡೆದು, ರಾಷ್ಟ್ರಪತಿ ಸಮ್ಮತಿಯನ್ನು ಪಡೆದಿರುವ ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಪ್ರತಿಭಟನೆ ನಡೆಸುತ್ತಿರುವ ವಿದ್ಯಾರ್ಥಿಗಳ ವಿರುದ್ಧ ಯಾವುದೇ ಕ್ರಮ ತೆಗೆದುಕೊಳ್ಳುವುದಿಲ್ಲ. ಆದಾಗ್ಯೂ, ಪ್ರತಿಭಟನೆ ವೇಳೆ ಸಾರ್ವಜನಿಕ ಆಸ್ರಿಗೆ ಯಾರು ಬೆಂಕಿ ಇಡಲು ಯತ್ನಿಸುತ್ತಾರೆ ಮತ್ತು ಧ್ವಂಸ ಮಾಡುವವರ ವಿರುದ್ಧ ಕ್ರಮ ಜರುಗಿಸಲಾಗುತ್ತದೆ ಎಂದು ಸ್ಪಷ್ಟಪಡಿಸಿದರು.
ಪೌರತ್ವ ತಿದ್ದುಪಡಿ ಕಾಯ್ದೆ ಅಲ್ಪಸಂಖ್ಯಾತ ವಿರೋಧಿಯಲ್ಲ. ಪಾಕಿಸ್ತಾನ, ಬಾಂಗ್ಲಾದೇಶ ಮತ್ತು ಅಫ್ಘಾನಿಸ್ತಾನದಲ್ಲಿ ಧಾರ್ಮಿಕ ಕಿರುಕುಳಕ್ಕೆ ತುತ್ತಾದ ಮುಸ್ಲಿಮೇತರರಿಗೆ ಭಾರತೀಯ ನಾಗರಿಕತ್ವ ನೀಡುವುದು ಇದರ ಉದ್ದೇಶ ಎಂದು ಮತ್ತೊಮ್ಮೆ ಹೇಳಿದರು. ಜೊತೆಗೆ ವಿರೋಧ ಪಕ್ಷಗಳನ್ನು ತೀವ್ರವಾಗಿ ಟೀಕಿಸಿದ ಅಮಿತ್ ಶಾ, ಕಾಯ್ದೆಯ ವಿರುದ್ಧ ತಪ್ಪು ಮಾಹಿತಿಯನ್ನು ನೀಡಿ, ಜನರ ದಿಕ್ಕು ತಪ್ಪಿಸಲಾಗುತ್ತಿದೆ ಎಂದು ಆರೋಪಿಸಿದರು.
Comments are closed.