ಮುಂಬೈ

ಚಿಕ್ಕಮ್ಮನ ಸೆಕ್ಸ್ ವಿಡಿಯೋ ತೋರಿಸಿ ಅಪ್ರಾಪ್ತೆ ಮೇಲೆ ಅತ್ಯಾಚಾರ

Pinterest LinkedIn Tumblr


ಮುಂಬೈ: ಚಿಕ್ಕಮ್ಮನ ಸೆಕ್ಸ್ ವಿಡಿಯೋವನ್ನು ವೈರಲ್ ಮಾಡುವುದಾಗಿ ಬೆದರಿಸಿ 17 ವರ್ಷದ ಅಪ್ರಾಪ್ತೆಯ ಮೇಲೆ ಅತ್ಯಾಚಾರ ಎಸಗಿದ್ದು, ಇದೀಗ ಆಕೆ ಗರ್ಭಿಣಿಯಾಗಿರುವ ಘಟನೆ ಮುಂಬೈ ನಗರದಲ್ಲಿ ನಡೆದಿದೆ.

ಆರೋಪಿಯನ್ನು 26 ವರ್ಷದ ಅಜ್ಮಲ್ ಲಷ್ಕರ್ ಅಲಿಯಾಸ್ ಆಶಿಶ್ ದುಬೆ ಎಂದು ಗುರುತಿಸಲಾಗಿದೆ. ಭಾನುವಾರ ಆರೋಪಿಯನ್ನು ಬಂಧಿಸಿ ಸ್ಥಳೀಯ ಕೋರ್ಟಿಗೆ ಹಾಜರುಪಡಿಸಲಾಗಿತ್ತು, ಕೋರ್ಟ್ ಜನವರಿ 17 ರವರೆಗೂ ಪೊಲೀಸ್ ಕಸ್ಟಡಿಗೆ ಒಪ್ಪಿಸಿದೆ ಎಂದು ಮುಂಬೈ ಪೊಲೀಸರು ತಿಳಿಸಿದ್ದಾರೆ.

ಏನಿದು ಪ್ರಕರಣ?
ಆರೋಪಿ ಆಶಿಶ್ ದುಬೆ ಹೆಸರಲ್ಲಿ 23 ವರ್ಷದ ಯುವತಿ ಮತ್ತು ಆಕೆಯ ಸೋದರ ಸೊಸೆಯನ್ನು ಪಾರ್ಟಿಯೊಂದರಲ್ಲಿ ಪರಿಚಯ ಮಾಡಿಕೊಂಡಿದ್ದನು. ನಂತರ ಯುವತಿಗೆ ಮದುವೆಯಾಗುವುದಾಗಿ ನಂಬಿಸಿ ಆಕೆಯೊಂದಿಗೆ ಸೆಕ್ಸ್ ಮಾಡಿದ್ದಾನೆ. ಆ ವಿಡಿಯೋವನ್ನು ಯುವತಿಗೆ ಗೊತ್ತಿಲ್ಲದಂತೆ ಮೊಬೈಲಿನಲ್ಲಿ ರೆಕಾರ್ಡ್ ಮಾಡಿಕೊಂಡಿದ್ದಾನೆ ಎಂದು ಡಿಸಿಪಿ ಮೋಹನ್ ದಹಿಕರ್ ತಿಳಿಸಿದ್ದಾರೆ.

ಸ್ವಲ್ಪ ದಿನದ ನಂತರ ಬಾಲಕಿಗೆ ಚಿಕ್ಕಮ್ಮ ಸೆಕ್ಸ್ ವಿಡಿಯೋ ತೋರಿಸಿ ಬ್ಲ್ಯಾಕ್‍ಮೇಲೆ ಮಾಡಿ ಅನೇಕ ಬಾರಿ ಅತ್ಯಾಚಾರ ಮಾಡಿದ್ದಾನೆ. ಅಲ್ಲದೇ ಈ ವಿಚಾರವನ್ನು ಯಾರಿಗಾದರೂ ಹೇಳಿದರೆ ವಿಡಿಯೋವನ್ನು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಮಾಡುವುದಾಗಿ ಬೆದರಿಕೆ ಹಾಕಿದ್ದಾನೆ. ಬಾಲಕಿ ಗರ್ಭಿಣಿಯಾದ ನಂತರ ಕುಟುಂಬದವರಿಗೆ ಈ ವಿಚಾರ ತಿಳಿದಿದೆ. ತಕ್ಷಣ ಮಹಿಳೆ ಬಂಗೂರ್ ಪೊಲೀಸ್ ಠಾಣೆಯಲ್ಲಿ ಆರೋಪಿಯ ವಿರುದ್ಧ ದೂರು ದಾಖಲಿಸಿದ್ದಾರೆ.

ಯುವತಿ ನೀಡಿದ ದೂರಿನ ಆಧಾರದ ಮೇರೆಗೆ ಆರೋಪಿ ವಿರುದ್ಧ ಐಪಿಸಿ ಕಾಯ್ಡೆಯಡಿ ಪ್ರಕರಣವನ್ನು ದಾಖಲಿಸಿಕೊಳ್ಳಲಾಗಿದೆ. ಇತ್ತ ಅಪ್ರಾಪ್ತೆಯ ಪೋಷಕರು ನೀಡಿದ ದೂರಿನ ಆಧಾರದ ಮೇರೆಗೆ ಪೋಕ್ಸೋ ಕಾಯ್ಡೆಯಡಿಯೂ ಎಫ್‍ಐಆರ್ ದಾಖಲಿಸಲಾಗಿದೆ. ಆರೋಪಿಯನ್ನು ಪತ್ತೆ ಮಾಡಿ ಉಪನಗರ ಖಾರ್ ಪ್ರದೇಶದಲ್ಲಿ ಬಂಧಿಸಲಾಗಿದೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

Comments are closed.