ಮುಂಬೈ

ಮಹಾರಾಷ್ಟ್ರದಲ್ಲಿ 328 ಮಂದಿಯಲ್ಲಿ ಹೊಸದಾಗಿ ಕೊರೋನಾ ಸೋಂಕು ಪತ್ತೆ; ಸಾವಿನ ಸಂಖ್ಯೆ 521ಕ್ಕೆ ಏರಿಕೆ

Pinterest LinkedIn Tumblr

ನವದೆಹಲಿ: ಮಹಾರಾಷ್ಟ್ರ ರಾಜ್ಯದಲ್ಲಿ 328 ಮಂದಿಯಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದ್ದು, ಇದರೊಂದಿಗೆ ದೇಶದಲ್ಲಿ ಸೋಂಕಿತರ ಸಂಖ್ಯೆ 15,712ಕ್ಕೆ ಏರಿಕೆಯಾಗಿದ್ದು, ಸಾವಿನ ಸಂಖ್ಯೆ 521ಕ್ಕೆ ಏರಿಕೆಯಾಗಿದೆ.

ಶನಿವಾದ ಒಂದೇ ದಿನದಲ್ಲಿಯೇ ದೇಶದಾದ್ಯಂತ 1144 ಹೊಸ ಕೊರೋನಾ ಸೋಂಕಿತ ಪ್ರಕರಣಗಳು ದೃಢಪಟ್ಟಿದ್ದು, ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 14792ಕ್ಕೆ ಏರಿಕೆಯಾಗಿದೆ ಇನ್ನು 39 ಸೋಂಕಿತರು ಸಾವನ್ನಪ್ಪಿದ ಹಿನ್ನೆಲೆಯಲ್ಲಿ ಭಾರತದಲ್ಲಿ ಸಾವನ್ನಪ್ಪಿದವರ ಸಂಖ್ಯೆ 521ಕ್ಕೆ ತಲುಪಿದೆ. ಇದೇ ವೇಳೆ ಸೋಂಕಿತರ ಪೈಕಿ ಈ ವರೆಗೆ 2135 ಗುಣಮುಖರಾಗಿದ್ದಾರೆ.

ಇನ್ನು ಮಹಾರಾಷ್ಟ್ರ ಒಂದೇ ದಿನದಲ್ಲಿ 328 ಪ್ರಕರಣ ದೃಢಪಟ್ಟಿದ್ದು, ಒಟ್ಟು ಸೋಂಕಿತ ಸಂಖ್ಯೆ 3548ಕ್ಕೆ ಏರಿಕೆಯಾಗಿದೆ. ಶನಿವಾರ ದಾಖಲಾದ 328 ಹೊಸ ಪ್ರಕರಣಗಳಲ್ಲಿ 184 ಮಂದಿ ಕೊರೋನಾ ಪೀಡಿತರು ಮುಂಬೈಗರು ಎಂಬುದು ಆತಂಕಕ್ಕೆ ಕಾರಣವಾಗಿದೆ. ಗುಜರಾತ್’ನಲ್ಲಿ 280 ಹೊಸ ಕೊರೋನಾ ಪ್ರಕರಣಗಳು ದಾಖಲಾಗಿದ್ದು, ಇದು ಇಲ್ಲಿ ಈ ವರೆಗೂ ದಾಖಲಾದ ಗರಿಷ್ಠ ಪ್ರಮಾಣವಾಗಿದೆ.

Comments are closed.