ಮುಂಬೈ

ಕೊರೋನಾಗೆ ಮಹಾರಾಷ್ಟ್ರದಲ್ಲಿ ಮತ್ತೊಬ್ಬ ಪೊಲೀಸ್ ಬಲಿ: ಮೃತಪಟ್ಟವರ ಸಂಖ್ಯೆ 31ಕ್ಕೆ ಏರಿಕೆ

Pinterest LinkedIn Tumblr


ಮುಂಬೈ: ಮಹಾರಾಷ್ಟ್ರದಲ್ಲಿ ಕೊರೋನಾ ವಾರಿಯರ್ ಪೊಲೀಸರನ್ನು ಮಹಾಮಾರಿ ತೀವ್ರವಾಗಿ ಕಾಡುತ್ತಿದ್ದು, ಶುಕ್ರವಾರ ಕೊವಿಡ್-19 ಗೆ ಮತ್ತೊಬ್ಬ ಪೊಲೀಸ್ ಸಿಬ್ಬಂದಿ ಬಲಿಯಾಗಿದ್ದಾರೆ. ಇದರೊಂದಿಗೆ ರಾಜ್ಯದಲ್ಲಿ ಕೊರೋನಾ ವೈರಸ್ ನಿಂದ ಮೃತಪಟ್ಟ ಪೊಲೀಸರ ಸಂಖ್ಯೆ 31ಕ್ಕೆ ಏರಿಕೆಯಾಗಿದೆ.

ಇಂದು ಮತ್ತೆ ನಾಲ್ವರು ಪೊಲೀಸ್ ಸಿಬ್ಬಂದಿಗೆ ಕೊವಿಡ್-19 ಪಾಸಿಟಿವ್ ದೃಢಪಟ್ಟಿದ್ದು, ಇದುವರೆಗೆ ಒಟ್ಟು 2561 ಪೊಲೀಸ್ ಸಿಬ್ಬಂದಿಗೆ ಪಾಸಿಟಿವ್ ಬಂದಿದೆ.

ಮಹಾರಾಷ್ಟ್ರ ದೇಶದಲ್ಲಿಯೇ ಅತಿ ಹೆಚ್ಚು ಕೊವಿಡ್-19 ಪ್ರಕರಣಗಳನ್ನು ಹೊಂದಿದ್ದು, ರಾಜ್ಯದಲ್ಲಿ ಒಟ್ಟು 77,793 ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ. ಈ ಪೈಕಿ 2710 ಮಂದಿ ಕೊರೋನಾ ವೈರಸ್ ಗೆ ಬಲಿಯಾಗಿದ್ದಾರೆ.

Comments are closed.