ಮುಂಬೈ: ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ವಿರುದ್ಧ ಯಾವುದೇ ದಾಖಲೆಗಳಿಲ್ಲದೆ ಆರೋಪ ಮಾಡುತ್ತಿರುವ ರಿಪಬ್ಲಿಕ್ ಟಿವಿ ಮುಖ್ಯ ಸಂಪಾದಕ ಅರ್ನಬ್ ಗೋಸ್ವಾಮಿ ವಿರುದ್ಧ ಕ್ರಮ ಕೈಗೊಳ್ಳುವಂತೆ ಮಹಾರಾಷ್ಟ್ರ ಸರ್ಕಾರಕ್ಕೆ ಶಿವಸೇನೆ ಆಗ್ರಹಿಸಿದೆ.
ಮಹಾರಾಷ್ಟ್ರ ಗೃಹ ಸಚಿವ ಅನಿಲ್ ದೇಶ್ಮುಖ್ ಅವರನ್ನು ಭೇಟಿ ಮಾಡಿರುವ ಶಿವಸೇನೆ ನಾಯಕ ಅರವಿಂದ ಸಾವಂತ್ ಅವರು, ಅರ್ನಬ್ ಗೋಸ್ವಾಮಿ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.
ಸಾಮಾಜದಲ್ಲಿ ಒಡಕುಂಟು ಮಾಡುವಂತಹ ಸುದ್ದಿಯು ಅರ್ನಬ್ ಗೋಸ್ವಾಮಿಯವರು ಸುದ್ದಿ ವಾಹಿನಿಯಲ್ಲಿ ಪ್ರಕಟಗೊಂಡಿದೆ. ಸುದ್ದಿಯಲ್ಲಿ ಮುಖ್ಯಮಂತ್ರಿಗಳನ್ನು ಅವಹೇಳನ ಮಾಡಲಾಗಿದೆ. ದಾಖಲೆಗಳಿಲ್ಲದೆಯೇ ಮುಖ್ಯಮಂತ್ರಿಗಳ ಮೇಲೆ ಆರೋಪ ಮಾಡಲಾಗಿದೆ. ಸುದ್ದಿ ಮಾಧ್ಯಮವು ಪತ್ರಿಕಾ ಮಂಡಳಿ ಕಾಯ್ದೆ ಸೆಕ್ಷನ್ 25 ಮತ್ತು 35ನ್ನು ಉಲ್ಲಂಘನೆ ಮಾಡಿದೆ ಎಂದು ತಿಳಿಸಿದ್ದಾರೆ.
Comments are closed.