ಮುಂಬೈ

ಕರ್ನಾಟಕ ಆಕ್ರಮಿತ ಕೆಲ ಭಾಗಗಳನ್ನು ಮಹಾರಾಷ್ಟ್ರಕ್ಕೆ ಸೇರಿಸಿಕೊಳ್ಳಲಿದ್ದೇವೆ: ವಿವಾದಾತ್ಮಕ ಹೇಳಿಕೆ ನೀಡಿದ ಉದ್ಧವ್ ಠಾಕ್ರೆ

Pinterest LinkedIn Tumblr

ಮುಂಬೈ: ಗಡಿ ವಿವಾದ ಕೆದಕಿರುವ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಕರ್ನಾಟಕ ಆಕ್ರಮಿತ ಕೆಲ ಭಾಗಗಳನ್ನು ಮಹಾರಾಷ್ಟ್ರಕ್ಕೆ ಸೇರಿಸಿಕೊಳ್ಳಲಿದ್ದೇವೆ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಮಹಾರಾಷ್ಟ್ರ ಸಿಎಂ ಕಚೇರಿ ಟ್ವೀಟ್ ಸಂದೇಶವನ್ನು ಪೋಸ್ಟ್ ಮಾಡಿದ್ದು ಬಹುಸಂಖ್ಯೆಯಲ್ಲಿ ಮರಾಠಿ ಭಾಷಿಕರಿರುವ ಹಾಗೂ ಮರಾಠಿ ಸಂಸ್ಕೃತಿಯನ್ನು ಒಳಗೊಂಡಿರುವ ಕೆಲವು ಪ್ರದೇಶವನ್ನು ಕರ್ನಾಟಕದಿಂದ ಮಹಾರಾಷ್ಟ್ರಕ್ಕೆ ಸೇರ್ಪಡೆ ಮಾಡಿಕೊಳ್ಳಲು ಸರ್ಕಾರ ಬದ್ಧವಾಗಿದೆ. ಇದು ಗಡಿ ವಿವಾದಕ್ಕಾಗಿ ಹೋರಾಟ ಮಾಡಿ ಪ್ರಾಣ ತ್ಯಾಗ ಮಾಡಿದವರಿಗೆ ನಾವು ನೀಡುವ ನಿಜವಾದ ಗೌರವವಾಗಿದೆ ಎಂದಿದೆ.

ಮಹಾರಾಷ್ಟ್ರ ಏಕೀಕರಣಕ್ಕಾಗಿ ಹೋರಾಡಿದವರ ಗೌರವಾರ್ಥಕವಾಗಿ ಮಹಾರಾಷ್ಟ್ರ ಏಕೀಕರಣ ಸಮಿತಿ ಪ್ರತಿವರ್ಷ ಜನವರಿ 17ರಂದು ಹುತಾತ್ಮರ ದಿನವನ್ನು ಆಚರಿಸುತ್ತಿದೆ.

ಬೆಳಗಾವಿಯ ಒಳಗೊಂಡಂತೆ ಕೆಲವು ಪ್ರದೇಶಗಳು ಹಿಂದೆ ಬಾಂಬೆ ಪ್ರೆಸಿಡೆನ್ಸಿಯ ಭಾಗವಾಗಿದ್ದು ಇದೀಗ ಕರ್ನಾಟಕದ ಭೂಭಾಗದಲ್ಲಿದೆ ಎಂಬ ವಾದವಿದ್ದು ಈ ಕುರಿತಾದ ಗಡಿ ವಿವಾದ ಹಲವು ವರ್ಷಗಳಿಂದ ಸುಪ್ರಿಂ ಕೋರ್ಟ್ ನ ವಿಚಾರಣೆಯಲ್ಲಿದೆ.

Comments are closed.