ಮುಂಬೈ

ಮಹಾರಾಷ್ಟ್ರದಲ್ಲಿ ಭೀಕರ ಸರಣಿ ಅಪಘಾತ; 5 ಮಂದಿ ಬಲಿ

Pinterest LinkedIn Tumblr

ಮುಂಬೈ: ನೆರೆಯ ಮಹಾರಾಷ್ಟ್ರದಲ್ಲಿ ಭೀಕರ ಸರಣಿ ಅಪಘಾತ ಸಂಭವಿಸಿದ್ದು, ದುರಂತದಲ್ಲಿ ಕನಿಷ್ಠ 5 ಮಂದಿ ಸಾವನ್ನಪ್ಪಿದ್ದಾರೆ.

ಮಹಾರಾಷ್ಟ್ರದ ಖೋಪಲಿ ಸಮೀಪದ ಮುಂಬೈ-ಪುಣೆ ಎಕ್ಸ್ ಪ್ರೆಸ್ ಹೆದ್ದಾರಿಯಲ್ಲಿ ಈ ದುರಂತ ಸಂಭವಿಸಿದ್ದು, ಹೆದ್ದಾರಿಯಲ್ಲಿ ಹತ್ತಕ್ಕೂ ಹೆಚ್ಚು ವಾಹನಗಳು ಸರಣಿಯಾಗಿ ಒಂದಕ್ಕೊಂದು ಢಿಕ್ಕಿಯಾಗಿವೆ. ಪರಿಣಾಮ ವಾಹನಗಳಲ್ಲಿದ್ದವರ ಪೈಕಿ ಐದು ಮಂದಿ ಸಾವನ್ನಪ್ಪಿದ್ದಾರೆ.

ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ. ಹೆದ್ದಾರಿಯಲ್ಲಿ ಮಂಜಿನ ವಾತಾವರಣ ತುಂಬಿದ್ದರಿಂದ ಮುಂದಿನ ವಾಹನಗಳು ಕಾಣದೇ ವಾಹನಗಳು ಪರಸ್ಪರ ಢಿಕ್ಕಿ ಹೊಡೆದಿದೆ ಎಂದು ಪ್ರತ್ಯಕ್ಷ ದರ್ಶಿಗಳು ಹೇಳಿದ್ದಾರೆ. ಅದಾಗ್ಯೂ ಅಪಘಾತಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ.

Comments are closed.