ಮುಂಬೈ

ಪಶ್ಚಿಮ ಬಂಗಾಳದಲ್ಲಿ ಮತ್ತೆ ಅಧಿಕಾರದ ಗದ್ದುಗೆ ಹಿಡಿದ ಮಮತಾ ಬ್ಯಾನರ್ಜಿ

Pinterest LinkedIn Tumblr

ಪಶ್ಚಿಮ ಬಂಗಾಳ, ಮೇ 2 : ಭಾರೀ ಕುತೂಹಲ ಮೂಡಿಸಿದ್ದ ಪಶ್ಚಿಮ ಬಂಗಾಳದ ಚುನಾವಣಾ ಫಲಿತಾಂಶ ಹೊರ ಬಿದ್ದಿದ್ದು, ಮಮತಾ ಬ್ಯಾನರ್ಜಿ ಅವರ ನೇತೃತ್ವದ ಅಖಿಲ ಭಾರತ ತೃಣಮೂಲ ಕಾಂಗ್ರೆಸ್ ಸತತವಾಗಿ ಮೂರನೇ ಬಾರಿಗೆ ಪಶ್ಚಿಮ ಬಂಗಾಳದಲ್ಲಿ ಅಧಿಕಾರ ಹಿಡಿದಿದೆ.

ಇಂದು ನಡೆದ ಮತ ಎಣಿಕೆಯಲ್ಲಿ ಮಮತಾ ಬ್ಯಾನರ್ಜಿ ಅವರ ತೃಣಮೂಲ ಕಾಂಗ್ರೆಸ್ ಭರ್ಜರಿ ಬಹುಮತದೊಂದಿಗೆ ಅಧಿಕಾರ ಹಿಡಿದಿದೆ. ಒಟ್ಟು 294 ವಿಧಾನಸಭಾ ಕ್ಷೇತ್ರಗಳ ಪೈಕ 292 ಕ್ಷೇತ್ರಗಳಿಗೆ ಚುನಾವಣೆ ನಡೆದಿತ್ತು. ಸರ್ಕಾರ ರಚಿಸಲು 147 ಸಂಖ್ಯಾಬಲ ಬೇಕಿತ್ತು. ಆದರೆ ಮ್ಯಾಜಿಕ್ ನಂಬರ್ ದಾಟಿದ ಟಿಎಂಸಿ194 ಕ್ಷೇತ್ರಗಳಲ್ಲಿ ಗೆಲವು ಸಾಧಿಸಿದೆ.

ಪ್ರಬಲಪೈಪೋಟಿ ನೀಡಿದ ಬಿಜೆಪಿ ತನ್ನ ಸಂಖ್ಯೆಯನ್ನು 93ಕ್ಕೆ ಹೆಚ್ಚಿಸಿಕೊಂಡಿದೆ. ಪಕ್ಷೇತರರು ಐದು ಕ್ಷೇತ್ರದಲ್ಲಿ ಜಯ ಸಾಧಿಸಿದ್ದಾರೆ. ಎಂಟು ಹಂತಗಳಲ್ಲಿ ನಡೆದಿದ್ದ ಪಶ್ಚಿಮ ಬಂಗಾಳದಲ್ಲಿ ಶತಾಯಗತಾಯ ಅಧಿಕಾರ ಹಿಡಿಯಲೇ ಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಹದಿನೆಂಟು ಬಾರಿ ಪಶ್ಚಿಮ ಬಂಗಾಳದಲ್ಲಿ ಪ್ರಚಾರ ರ್ಯಾಲಿಗಳನ್ನು ನಡೆದಿದ್ದರು.

ಕೇಂದ್ರ ಗೃಹ ಸಚಿವರ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಬಿಜೆಪಿ ರಾಷ್ಟೀಯ ಅಧ್ಯಕ್ಷ ಜೆ.ಪಿ.ನಡ್ಡಾ, ಬಿಜೆಪಿ ರಾಷ್ಟ್ರೀಯ ಯುವ ಅಧ್ಯಕ್ಷ ತೇಜೆಸ್ವಿ ಸೂರ್ಯ ಸೇರಿದಂತೆ ಘಟಾನುಘಟಿ ನಾಯಕರು ನಿರಂತರವಾಗಿ ಪ್ರವಾಸ ಮಾಡಿ ಪ್ರಚಾರ ನಡೆಸಿದ್ದರು.

Comments are closed.