ಮನೋರಂಜನೆ

ಮಕಾವು ಓಪನ್: ಸಿಂಧು ಫೈನಲ್‌ಗೆ

Pinterest LinkedIn Tumblr

pv-sindhu_0208getty_6301

ಮಕಾವು, ನನ.29: ಭಾರತದ ಶಟ್ಲರ್ ಪಿ.ವಿ. ಸಿಂಧು ಮಕಾವು ಓಪನ್ ಗ್ರಾನ್ ಪ್ರಿ ಗೋಲ್ಡ್ ಟೂರ್ನಿಯಲ್ಲಿ ಫೈನಲ್‌ಗೆ ತಲುಪಿದ್ದಾರೆ. ಈ ಮೂಲಕ ಸತತ ಎರಡನೆ ಪ್ರಶಸಿ ್ತಗೆಲ್ಲುವತ್ತ ದಿಟ್ಟ ಹೆಜ್ಜೆ ಇಟ್ಟಿದ್ದಾರೆ. ಶನಿವಾರ ಇಲ್ಲಿ ನಡೆದ ಪುರುಷರ ಸಿಂಗಲ್ಸ್ ಸೆಮಿಫೈನಲ್‌ನಲ್ಲಿ ಭಾರತದ ಎಚ್‌ಎಸ್ ಪ್ರಣಯ್ ಸೋಲುಭವಿಸುವ ಮೂಲಕ ಟೂರ್ನಿಯಿಂದ ಹೊರ ನಡೆದಿದ್ದಾರೆ. ಎರಡು ಬಾರಿ ವಿಶ್ವ ಚಾಂಪಿಯನ್‌ಷಿಪ್‌ನಲ್ಲಿ ಕಂಚಿನ ಪದಕವನ್ನು ಜಯಿಸಿದ್ದ ಸಿಂಧು ಥಾಯ್ಲೆಂಡ್‌ನ ಬುಸನನ್ ಒಂಗ್‌ಬುಮ್‌ರಂಗ್ಪನ್ ವಿರುದ್ಧ 21-14, 21-15 ಸೆಟ್‌ಗಳಿಂದ ಗೆಲುವು ಸಾಧಿಸಿದರು. ಪುರುಷರ ಸಿಂಗಲ್ಸ್ ಸೆಮಿಫೈನಲ್ ಪಂದ್ಯದಲ್ಲಿ ವಿಶ್ವದ ನಂ.26ನೆ ಆಟಗಾರ ಪ್ರಣಯ್ ಹಾಂಕಾಂಗ್‌ನ ವಾಂಗ್ ವಿಂಗ್ ಕಿ ವಿನ್ಸೆಂಟ್ ವಿರುದ್ಧ 16-21, 21-16, 12-21 ಸೆಟ್‌ಗಳಿಂದ ಶರಣಾಗಿದ್ದಾರೆ. ಮಹಿಳೆಯರ ಸಿಂಗಲ್ಸ್ ಫೈನಲ್‌ನಲ್ಲಿ ವಿಶ್ವದ ನಂ.23ನೆ ಆಟಗಾರ್ತಿ ಬುಸನನ್ ಸಿಂಧು ವಿರುದ್ಧ ಉತ್ತಮ ಪ್ರದರ್ಶನ ನೀಡಲು ಯತ್ನಿಸಿದ್ದರು. ಆದರೆ ಆಕ್ರಮಣಕಾರಿ ಆಟ ಪ್ರದರ್ಶಿಸಿದ ಸಿಂಧು ವಿರುದ್ಧ ವೈಫಲ್ಯ ಕಂಡರು.

ಬುಸನನ್ 5-2 ಮುನ್ನಡೆಯೊಂದಿಗೆ ಮೊದಲ ಗೇಮ್‌ನಲ್ಲಿ ಉತ್ತಮ ಆರಂಭವನ್ನು ಪಡೆದಿದ್ದರು. ಆದರೆ ಸಿಂಧು 5-5 ರಿಂದ ಸಮಬಲ ಸಾಧಿಸಿ ತಿರುಗೇಟು ನೀಡಿದರು. ಎರಡನೆ ಗೇಮ್‌ನಲ್ಲಿ ಸಂಪೂರ್ಣ ಮೇಲುಗೈ ಸಾಧಿಸಿದ ಸಿಂಧು ಬುಸನನ್ ಮರು ಹೋರಾಡಲು ಅವಕಾಶವನ್ನೇ ನೀಡಲಿಲ್ಲ. 19ರ ಹರೆಯದ ಸಿಂಧು ಬುಸನನ್ ವಿರುದ್ದ ಈ ತನಕ ಆಡಿರುವ ಐದೂ ಪಂದ್ಯಗಳಲ್ಲಿ ಗೆಲುವು ಸಾಧಿಸಿದ್ದು, 5-0 ಗೆಲುವಿನ ದಾಖಲೆ ಕಾಯ್ದುಕೊಂಡಿದ್ದಾರೆ.

Write A Comment