ಮನೋರಂಜನೆ

ಕನ್ನಡ ಮಾಧ್ಯಮ ಪ್ರಶಸ್ತಿ’ ಪ್ರದಾನ ಸಮಾರಂಭ: ಭಾಷಾ ರಕ್ಷಣೆಗೆ ಲಕ್ಷ ಸಹಿ; ಸಾಹಿತಿ ಡಾ. ಚಂದ್ರಶೇಖರ ಕಂಬಾರ

Pinterest LinkedIn Tumblr

pvec080215Kannada 02

ಬೆಂಗಳೂರು: ‘ದೇಶೀಯ ಭಾಷೆಗಳ ರಕ್ಷಣೆಗೆ ಸಂಬಂಧಿಸಿದಂತೆ ರಾಜ್ಯದಲ್ಲಿ ಇದುವರೆಗೆ 1ಲಕ್ಷ ಸಹಿ ಸಂಗ್ರಹಿ­ಸಲಾಗಿದೆ’ ಎಂದು ಹಿರಿಯ ಸಾಹಿತಿ ಚಂದ್ರಶೇಖರ ಕಂಬಾರ ಹೇಳಿದರು.

ಕನ್ನಡ ಅಭಿವೃದ್ಧಿ ಪ್ರಾಧಿಕಾರ ಶನಿ­ವಾರ ವಿಧಾನಸೌಧದ ಬ್ಯಾಂಕ್ವೆಟ್‌ ಹಾಲ್‌­ನಲ್ಲಿ ಆಯೋಜಿಸಿದ್ದ ಕನ್ನಡ ಮಾಧ್ಯಮದಲ್ಲಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ‘ಕನ್ನಡ ಮಾಧ್ಯಮ ಪ್ರಶಸ್ತಿ’ ಪ್ರದಾನ ಮಾಡಿ ಮಾತನಾಡಿದರು.

‘ಮಾತೃಭಾಷಾ ದಿನವಾದ ಫೆಬ್ರು­ವರಿ 21ರಂದು ನನ್ನ ನೇತೃತ್ವದ ನಿಯೋಗ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ರಾಷ್ಟ್ರಪತಿ ಪ್ರಣವ್‌ ಮುಖರ್ಜಿ ಅವರನ್ನು ಭೇಟಿಯಾಗ­ಲಿದೆ. ಇದರ ಜವಾಬ್ದಾರಿಯನ್ನು ಕನ್ನಡ ಅಭಿವೃದ್ಧಿ ಪ್ರಾಧಿಕಾರ ವಹಿಸಿ­ಕೊಳ್ಳಬೇಕು’ ಎಂದು ಅವರು ಮನವಿ ಮಾಡಿದರು.

ರಾಜ್ಯದಲ್ಲಿ ಪ್ರಾಥಮಿಕ ಶಿಕ್ಷಣವನ್ನು ಕನ್ನಡ ಮಾಧ್ಯಮದಲ್ಲೇ ನೀಡಬೇಕು ಎಂಬ ಸಂಪುಟದ ತೀರ್ಮಾನ ಸ್ವಾಗ­ತಾರ್ಹ. ಇದನ್ನು ಕಾಯ್ದೆಯಾಗಿ ರೂಪಿ­ಸ­ಬೇಕು ಎಂದರು.

ಕಾರ್ಯಕ್ರಮವನ್ನು ಉದ್ಘಾಟಿಸಿದ ಮಾತನಾಡಿದ ಮುಖ್ಯಮಂತ್ರಿ ಸಿದ್ದ­ರಾಮಯ್ಯ, ‘ಕರ್ನಾಟಕದಲ್ಲಿ ಕನ್ನಡ ಮಾಧ್ಯಮ ಶಿಕ್ಷಣ ನೀಡಲು ಸರ್ಕಾರ ಬದ್ಧವಾಗಿದೆ. ಜ್ಞಾನ ವಿಕಾಸಕ್ಕಾಗಿ ಆಂಗ್ಲ ಮಾಧ್ಯಮವನ್ನು ಅವಲಂಬಿಸ­ಬೇಕು ಎಂಬುದು ತಪ್ಪು ಕಲ್ವನೆ.  ನಮ್ಮ ಅನೇಕ ವಿಜ್ಞಾನಿಗಳು, ವೈದ್ಯರು, ತಂತ್ರಜ್ಞಾನ ಕ್ಷೇತ್ರದ ದಿಗ್ಗ­ಜರು ಕನ್ನಡ ಮಾಧ್ಯಮದಲ್ಲೇ ವ್ಯಾಸಂಗ ಮಾಡಿದವರು’ ಎಂದರು.

ಬೆಂಗಳೂರು ವಿಭಾಗದಲ್ಲಿ ಕನ್ನಡ ಮಾಧ್ಯಮದಲ್ಲಿ ವ್ಯಾಸಂಗ ಮಾಡಿ ಅತಿ ಹೆಚ್ಚು ಅಂಕ ಗಳಿಸಿದ ಎಸ್ಸೆಸ್ಸೆ­ಲ್ಸಿಯ೧೯೩ ಮತ್ತು ಪಿ.ಯು.ಸಿ.ಯ ೧೬೪ ವಿದ್ಯಾರ್ಥಿಗಳು ಸೇರಿದಂತೆ ಒಟ್ಟು ೩೫೭ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.

ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ  ಕಿಮ್ಮನೆ ರತ್ನಾಕರ,  ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಸಚಿವ ಆರ್. ರೋಷನ್ ಬೇಗ್‌  ಕನ್ನಡ ಅಭಿ­ವೃದ್ಧಿ ಪ್ರಾಧಿಕಾರದ  ಅಧ್ಯಕ್ಷ ಡಾ. ಎಲ್. ಹನುಮಂತಯ್ಯ ಉಪಸ್ಥಿತರಿದ್ದರು.

Write A Comment