ಕೃಷ್ಣಮೃಗ ಬೇಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೋಧಪುರ ನ್ಯಾಯಾಲಯಕ್ಕೆ ಹಾಜರಾಗಿದ್ದ ಚಿತ್ರನಟ ಸಲ್ಮಾನ್ ಖಾನ್ ತಮ್ಮ ಮೇಲೆ ಬಂದಿರುವ ಆರೋಪದ ಕುರಿತು ಹೇಳಿಕೆ ನೀಡಿದ್ದಾರೆ.
ನ್ಯಾಯಾಲಯದ ಎದುರು ತಮ್ಮ ಮೇಲಿರುವ ಆರೋಪವನ್ನು ಸಾರಾಸಗಟಾಗಿ ನಿರಾಕರಿಸಿದ ಸಲ್ಮಾನ್‌ಖಾನ್ ಕಕ್ಷಿದಾರರು ತಮ್ಮ ವಿರುದ್ಧ ಸುಳ್ಳು ಹೇಳಿಕೆಗಳನ್ನು ನೀಡಿದ್ದಾರೆ, ಇದರಲ್ಲಿ ಯಾವುದೇ ಸತ್ಯಾಂಶವಿಲ್ಲ ಎಂದು ತಿಳಿಸಿದರು.
1998ರ ಚಿತ್ರೀಕರಣ ಬಿಡುವಿನ ವೇಳೆಯಲ್ಲಿ ನಟ ಸಲ್ಮಾನ್ ಖಾನ್ ಕೃಷ್ಣಮೃಗ ಬೇಟೆಯಾಡಿದ್ದರು ಎನ್ನಲಾಗಿದ್ದು ಈ ಕುರಿತು ಸಲ್ಮಾನ್ ವಿರುದ್ದ ಪ್ರಕರಣ ದಾಖಲಾಗಿತ್ತು. ಅಲ್ಲದೇ ಈ ಪ್ರಕರಣದ ಕುರಿತಂತೆ ಹಲವು ಬಾರಿ ನ್ಯಾಯಾಲಯಕ್ಕೆ ಹಾಜರಾಗಿದ್ದ ಸಲ್ಮಾನ್ ಖಾನ್ ಕಳೆದ ಬಾರಿ ಅನಾರೋಗ್ಯದಿಂದ ನ್ಯಾಯಾಲಯಕ್ಕೆ ಹಾಜರಾಗಿರಲಿಲ್ಲ. ಹಾಗಾಗಿ ಈ ಪ್ರಕರಣದ ವಿಚಾರಣೆ ಬುಧವಾರಕ್ಕೆ ಮುಂದೂಡಲ್ಪಟ್ಟಿತ್ತು.
-ಕೃಪೆ: ಕನ್ನಡ ದುನಿಯಾ
