ಐಪಿಎಲ್ ಬೆಟ್ಟಿಂಗ್ ಪ್ರಕರಣದಿಂದ ಹೊರಬಂದರೂ ಬಿಸಿಸಿಐ ನಿಂದ ‘ನಿಷೇಧ’ ಶಿಕ್ಷೆ ಎದುರಿಸುತ್ತಿರುವ ಶ್ರೀಶಾಂತ್ ತಾವು 2019ರಲ್ಲಿ ನಡೆಯಲಿರುವ ವಿಶ್ವಕಪ್ ಪಂದ್ಯದಲ್ಲಿ ಖಂಡಿತವಾಗಿಯೂ ಆಡುತ್ತೇನೆ ಎಂದು ತಿಳಿಸಿದ್ದಾರೆ.
ಕಳೆದೆರಡು ದಿನಗಳ ಹಿಂದಷ್ಟೇ ಶ್ರೀಶಾಂತ್ ಗೆ ಬಿಸಿಸಿಐ ವಿಧಿಸಿರುವ ನಿಷೇಧವನ್ನು ಯಾವುದೇ ಕಾರಣಕ್ಕೂ ಹಿಂತೆಗೆಯುವ ಪ್ರಶ್ನೆಯೇ ಇಲ್ಲ್ಲ ಎಂದು ಬಿಸಿಸಿಐ ಕಾರ್ಯದರ್ಶಿ ಅನುರಾಗ್ ಠಾಕೂರ್ ಹೇಳಿದ್ದರು. ಅಲ್ಲದೇ ಐಪಿಎಲ್ ಬೆಟ್ಟಿಂಗ್ ನಲ್ಲಿ ಭಾಗಿಯಾಗಿದ್ದ ಕ್ರಿಕೆಟಿಗರು ಮತ್ತೆ ವಾಪಸ್ ಬರುವುದು ಕಷ್ಟ. ನ್ಯಾಯಾಲಯ ಅವರಿಗೆ ಕ್ಲೀನ್ ಚಿಟ್ ಕೊಟ್ಟಿದ್ದರೂ ಬಿಸಿಸಿಐ ಅವರ ಮೇಲೆ ಹೇರಿರುವ ನಿಷೇಧ ಹಿಂತೆಗೆದುಕೊಳ್ಳುವುದಿಲ್ಲ ಎಂದು ತಿಳಿಸಿದ್ದರು.
ಈ ಹಿನ್ನೆಲೆಯಲ್ಲಿ ಪ್ರತಿಕ್ರಿಯೆ ನೀಡಿರುವ ಶ್ರೀಶಾಂತ್ ನನ್ನನ್ನು ಟೀಂ ಇಂಡಿಯಾಗೆ ಆಯ್ಕೆ ಮಾಡುವ ಕುರಿತಾಗಿ ಬಿಸಿಸಿಐ ಸಾಕಷ್ಟು ಸಮಯ ತೆಗೆದುಕೊಳ್ಳಲಿ, 2019ರ ವಿಶ್ವಕಪ್ ತಂಡದಲ್ಲಿ ನಾನಿರುತ್ತೇನೆ ಎಂಬ ಭರವಸೆ ವ್ಯಕ್ತಪಡಿಸಿದ್ದಾರೆ.